ನೇಪಾಳ: ಆರು ಮಂದಿ ಅಂತಾರಾಷ್ಟ್ರೀಯ ಕಳ್ಳರನ್ನು ಬಂಧಿಸಿರುವ ನೇಪಾಳ ಪೊಲೀಸರು ಭಾರತದಲ್ಲಿ ಚಲಾವಣೆಗೆ ತರಲು ಉದ್ದೇಶಿಸಿದ್ದ ಭಾರಿ ಪ್ರಮಾಣದ ಖೋಟಾ ನೋಟುಗಳನ್ನು ವಶಪಡಿಸಿಕೊಂಡಿದ್ದಾರೆ.

ಭಾರತದಲ್ಲಿ ಚಲಾವಣೆಯಲ್ಲಿರುವ ₹2 ಸಾವಿರ,₹ 500 ರ ನೋಟುಗಳನ್ನು ಬ್ಯಾಗುಗಳಲ್ಲಿ ತುಂಬಿಕೊಂಡು ಭಾರತಕ್ಕೆ ನುಸುಳಲು ಯತ್ನಿಸಿದ್ದರು ಎನ್ನಲಾಗಿದೆ. ಇವರಲ್ಲಿ ನಾಲ್ಕು ಮಂದಿ ಪಾಕಿಸ್ತಾನದವರು, ಇಬ್ಬರು ನೇಪಾಳಿಗಳು ಎಂದು ಗುರುತಿಸಲಾಗಿದೆ.

ಶುಕ್ರವಾರ ಕಠ್ಮಂಡುವಿನತ್ರಿಭುವನ್ ಅಂತಾರಾಷ್ಟ್ರೀಯ ವಿಮಾನಕ್ಕೆ ಬರುತ್ತಿದ್ದಂತೆ ವಿಮಾನ ನಿಲ್ದಾಣದ ಭದ್ರತಾ ಸಿಬ್ಬಂದಿ ಆರೋಪಿಗಳು ಹೊಂದಿದ್ದ ಬ್ಯಾಗುಗಳನ್ನು ತಪಾಸಣೆಗೆ ಒಳಪಡಿಸಿದರು. ಈ ಸಮಯದಲ್ಲಿ ಭಾರಿ ಪ್ರಮಾಣದಲ್ಲಿ ನೋಟುಗಳು ಇರುವುದು ಕಂಡು ಬಂದಿದೆ. ಕೂಡಲೆ ಎಲ್ಲರನ್ನೂ ವಶಕ್ಕೆ ಪಡೆದಾಗ ಇವುಗಳನ್ನು ಭಾರತಕ್ಕೆ ಕೊಂಡೊಯ್ಯಲು ವಿಮಾನ ನಿಲ್ದಾಣಕ್ಕೆ ಬಂದುದಾಗಿ ಆರೋಪಿಗಳು ಬಾಯಿಬಿಟ್ಟಿದ್ದಾರೆ.ಕಠ್ಮಂಡು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.