ಭಾನುವಾರ, 16 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ; 41,961 ವಿದ್ಯಾರ್ಥಿಗಳು ಪಾಸ್‌

Published 12 ಸೆಪ್ಟೆಂಬರ್ 2023, 10:03 IST
Last Updated 12 ಸೆಪ್ಟೆಂಬರ್ 2023, 10:03 IST
ಅಕ್ಷರ ಗಾತ್ರ

ಬೆಂಗಳೂರು: ಕಳೆದ ಆಗಸ್ಟ್‌ನಲ್ಲಿ ನಡೆದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದೆ. ಈ ಬಾರಿ ಒಟ್ಟು 41,961 (ಶೇ 35.21) ವಿದ್ಯಾರ್ಥಿಗಳು ಪಾಸಾಗಿದ್ದಾರೆ.

ಫಲಿತಾಂಶ karresult.nic.in ಅಂತರ್ಜಾಲ ತಾಣದಲ್ಲಿ ಲಭ್ಯ. ಕಾಲೇಜುಗಳಲ್ಲಿ ಬುಧವಾರ ಬೆಳಿಗ್ಗೆ 10ಕ್ಕೆ ಫಲಿತಾಂಶ ಪ್ರಕಟವಾಗಲಿದೆ.

ರಾಜ್ಯದ ಒಟ್ಟು 274 ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ನಡೆದಿತ್ತು. ಉತ್ತರ ಪತ್ರಿಕೆಗಳ ಮೌಲ್ಯಮಾಪನ ಬೆಂಗಳೂರಿನಲ್ಲಿ 10 ಶಿಬಿರಗಳಲ್ಲಿ ನಡೆದಿತ್ತು. ಈ ಬಾರಿ 1.21 ಲಕ್ಷ ವಿದ್ಯಾರ್ಥಿಗಳು ಪೂರಕ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು. ಅವರಲ್ಲಿ 1.19 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. 

ಪರೀಕ್ಷೆಗೆ ಹಾಜರಾದವರಲ್ಲಿ 75,967 ಬಾಲಕರು. ಇವರಲ್ಲಿ 24,845 (ಶೇ 32.7)ರಷ್ಟು ತೇರ್ಗಡೆ ಹೊಂದಿದ್ದಾರೆ. ಪರೀಕ್ಷೆ ಎದುರಿಸಿದ 43,216 ಬಾಲಕಿಯರಲ್ಲಿ 17,116 (ಶೇ 39.61) ರಷ್ಟು ಪಾಸಾಗಿದ್ದಾರೆ. 

ಕಲಾ ವಿಷಯದಲ್ಲಿ 61,184 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಇವರಲ್ಲಿ 22,409 (ಶೇ 36.63) ರಷ್ಟು ವಿದ್ಯಾರ್ಥಿಗಳು ಪಾಸಾಗಿದ್ದಾರೆ. ವಾಣಿಜ್ಯ ವಿಷಯದಲ್ಲಿ 36,279 ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಿದ್ದು, ಇವರಲ್ಲಿ 10,093 (ಶೇ 27.82) ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. ವಿಜ್ಞಾನ ವಿಷಯದಲ್ಲಿ 21,720 ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಿದ್ದರು. ಇವರಲ್ಲಿ 9,459 (ಶೇ 43.55) ರಷ್ಟು ವಿದ್ಯಾರ್ಥಿಗಳು ಪಾಸಾಗಿದ್ದಾರೆ.

ಕನ್ನಡ ಮಾಧ್ಯಮದ ವಿದ್ಯಾರ್ಥಿಗಳ ತೇರ್ಗಡೆ ಪ್ರಮಾಣ ಶೇ 35.71ರಷ್ಟಿದ್ದರೆ, ಇಂಗ್ಲಿಷ್ ಮಾಧ್ಯಮದವರ ಪ್ರಮಾಣ ಶೇ 34.4ರಷ್ಟಿದೆ. ಉತ್ತರ ಪತ್ರಿಕೆಯ ಸ್ಕ್ಯಾನಿಂಗ್ ಪ್ರತಿಗಾಗಿ ಅರ್ಜಿ ಸಲ್ಲಿಸಲು ಸೆ. 15ರವರೆಗೆ ಅವಕಾಶ ನೀಡಲಾಗಿದೆ. ಉತ್ತರ ಪತ್ರಿಕೆಯನ್ನು ಸೆ. 16ರಿಂದ 17ರೊಳಗೆ kseab.karnataka.gov.in ಅಂತರ್ಜಾಲ ತಾಣದಿಂದ ಡೌನ್‌ಲೋಡ್ ಮಾಡಿಕೊಳ್ಳಬಹುದು.

ಕಡ್ಡಾಯವಾಗಿ ಸ್ಕ್ಯಾನಿಂಗ್ ಪ್ರತಿ ಪಡೆದವರಿಗೆ ಮಾತ್ರ ಮರುಮೌಲ್ಯಮಾಪನಕ್ಕೆ ಹಾಗೂ ಮರು ಎಣಿಕೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಇದಕ್ಕೆ ಸೆ. 16ರಿಂದ 18ರವರೆಗೆ ಅವಕಾಶ ನೀಡಲಾಗಿದೆ. ಸ್ಕ್ಯಾನಿಂಗ್ ಪ್ರತಿ ಪಡೆಯಲು ಪ್ರತಿ ವಿಷಯಕ್ಕೆ ₹530 ಹಾಗೂ ಮರು ಮೌಲ್ಯಮಾಪನಕ್ಕೆ ಪ್ರತಿ ವಿಷಯಕ್ಕೆ ₹1670 ಶುಲ್ಕ ಪಾವತಿಸಬೇಕು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಹೇಳಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT