ನವದೆಹಲಿ: ಕಾಂಗ್ರೆಸ್ ಅಧ್ಯಕ್ಷನಾಗಿ ತಾನು ಮುಂದುವರಿಯಲು ಇಚ್ಛಿಸುವುದಿಲ್ಲ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಬುಧವಾರ ಬೆಳಗ್ಗೆ ಸಂಸತ್ ಕಲಾಪ ಆರಂಭವಾಗುವ ಮುನ್ನ 11.00 ಗಂಟೆಗೆ ಕಾಂಗ್ರೆಸ್ ಸಂಸದೀಯ ಪಕ್ಷದ ಸಭೆ ನಡೆದಿತ್ತು. ಈ ಸಭೆಯಲ್ಲಿ ಕಾಂಗ್ರೆಸ್ ಪಕ್ಷದ ಎಲ್ಲ ಸಂಸದರು ಭಾಗಿಯಾಗಿದ್ದರು.

ರಾಹುಲ್ ಗಾಂಧಿಯವರೇ ಅಧ್ಯಕ್ಷರಾಗಿ ಮುಂದುವರಿಯಬೇಕೆಂದು ಪಕ್ಷ ಮೌನ ಸಮ್ಮತಿ ಸೂಚಿಸಿತ್ತು. ಆದರೆ ತಾನು ಅಧ್ಯಕ್ಷ ಸ್ಥಾನದಲ್ಲಿ ಮುಂದುವರಿಯಲು ಬಯಸುವುದಿಲ್ಲ ಎಂಬ ತೀರ್ಮಾನ ರಾಹುಲ್ ಗಾಂಧಿಯದ್ದಾಗಿದೆ.

ಮಂಗಳವಾರ ಸಂಜೆ ಪಂಜಾಬ್ಭವನದಲ್ಲಿ ಕೆಲವು ನಾಯಕರು ಸೇರಿ ಪಕ್ಷದೊಳಗಿನ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಿದ್ದರು.ಅದೇ ವೇಳೆ ಪಕ್ಷದ ಕೇಂದ್ರ ಕಚೇರಿಯಲ್ಲಿ ದೊಡ್ಡ ಮಟ್ಟದ ಸಭೆ ಶೀಘ್ರದಲ್ಲೇ ನಡೆಯಲಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ಪತ್ರಿಕೆ ವರದಿ ಮಾಡಿದೆ.

ನೀವು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದರೆ ಆ ಸ್ಥಾನಕ್ಕೆ ಯಾರು ಬರುತ್ತಾರೆ? ಎಂದು ಕೇಳಿದಾಗ,ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಲು ನಾನು ಸರಿಯಾದ ವ್ಯಕ್ತಿ ಅಲ್ಲ.ನಾನು ಈ ಪ್ರಕ್ರಿಯೆಯಲ್ಲಿ ಭಾಗಿಯಾಗುವುದಿಲ್ಲ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಇದನ್ನೂ ಓದಿ:ಮಾತುಕತೆಗೆ ಮುಂದಾದ ರಾಹುಲ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.