ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿ ಧೋರಣೆಯಿಂದ ಬೇಸತ್ತು ಕಾಂಗ್ರೆಸ್ ಸೇರ್ಪಡೆ: ಟಿ.ಡಿ.ರಾಜೇಗೌಡ

Published 23 ಏಪ್ರಿಲ್ 2023, 3:03 IST
Last Updated 23 ಏಪ್ರಿಲ್ 2023, 3:03 IST
ಅಕ್ಷರ ಗಾತ್ರ

ನರಸಿಂಹರಾಜಪುರ: ಬಿಜೆಪಿಯ ಧೋರಣೆಯಿಂದ ಬೇಸತ್ತು ಹಲವು ಮುಖಂಡರು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದಾರೆ ಎಂದು ಶಾಸಕ ಟಿ.ಡಿ.ರಾಜೇಗೌಡ ತಿಳಿಸಿದರು.

ಇಲ್ಲಿನ ತಾಲ್ಲೂಕು ಕಾಂಗ್ರೆಸ್ ಕಚೇರಿಯಲ್ಲಿ ಶುಕ್ರವಾರ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಭಾರತದ ಜಾತ್ಯಾತೀತ ರಾಷ್ಟ್ರವಾಗಿದ್ದು ಇಲ್ಲಿ ಎಲ್ಲರಿಗೂ ಬದುಕುವ ಸಮಾನ ಹಕ್ಕನ್ನು ಸಂವಿಧಾನ ನೀಡಿದ್ದು ಇದಕ್ಕೆ ಕಾಂಗ್ರೆಸ್ ನ ತತ್ವ ಸಿದ್ಧಾಂತ ಬದ್ಧವಾಗಿದೆ‘ ಎಂದರು.

ವಿಧಾನ ಪರಿಷತ್ ಮಾಜಿ ಸದಸ್ಯ ಎಂ.ಶ್ರೀನಿವಾಸ್ ಮಾತನಾಡಿ, ‘ಕಾಂಗ್ರೆಸ್ ಅಧಿಕಾರಕ್ಕೆ ಬರಲು ಹಿರಿಯ ಕಾರ್ಯಕರ್ತರ ಅನುಭವಗಳು ಯುವ ಕಾರ್ಯಕರ್ತರ ಪಡೆಗೆ ಬೇಕಾಗಿದೆ. ಪಕ್ಷಕ್ಕೆ ಹಿಂದಿರುಗಿ ಬರುವಂತೆ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಿಗೆ ಮನವಿ ಮಾಡಲಾಗಿತ್ತು. ಬಿಜೆಪಿಯಲ್ಲಿ ಉಸಿರುಕಟ್ಟಿದ ವಾತಾವರಣವಿದ್ದುದರಿಂದ ಅವರು ಪುನಃ ಕಾಂಗ್ರೆಸ್‌ಗೆ ಹಿಂದಿರುಗಿದ್ದಾರೆ. ಶೃಂಗೇರಿಯಲ್ಲಿ ಶನಿವಾರ ನಡೆಯುವ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷರ ಸಮ್ಮುಖದಲ್ಲಿ ಕಾಂಗ್ರೆಸ್ ಗೆ ಸುಬ್ರಹ್ಮಣ್ಯ ಅವರು ಸೇರ್ಪಡೆಯಾಗಲಿದ್ದಾರೆ‘ ಎಂದರು.

ಕಾಂಗ್ರೆಸ್ ಸೇರ್ಪಡೆಯಾದ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಬಿ.ಎಸ್.ಸುಬ್ರಹ್ಮಣ್ಯ ಮಾತನಾಡಿ, ‘ಅನಿವಾರ್ಯ ಕಾರಣಗಳಿಂದ ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರ್ಪಡೆಯಾಗಿದ್ದೆ. ಬಿಜೆಪಿ ವಾತಾವರಣಕ್ಕೂ ಕಾಂಗ್ರೆಸ್ ವಾತಾವರಣಕ್ಕೂ ವ್ಯತ್ಯಾಸವಿದೆ. ಕ್ಷೇತ್ರದಲ್ಲಿ ಬಿಜೆಪಿಯಲ್ಲಿ ಸರ್ವಾಧಿಕಾರಿ ಧೋರಣೆಯಿದ್ದು ಒಬ್ಬ ವ್ಯಕ್ತಿ ಹೇಳಿದ್ದನ್ನು ಎಲ್ಲರೂ ಕೇಳುವ ಸ್ಥಿತಿ ಇದೆ. ಅಭಿಪ್ರಾಯ ಹಂಚಿಕೊಳ್ಳಲು ಮುಕ್ತ ಸ್ವಾತಂತ್ರ್ಯವಿಲ್ಲ’ ಎಂದರು.

ಕೆಪಿಸಿಸಿ ಸದಸ್ಯ ಪಿ.ಆರ್.ಸದಾಶಿವ ಮಾತನಾಡಿದರು. ತಾಲ್ಲೂಕು ಕಾಂಗ್ರೆಸ್ ಘಟಕದ ಅಧ್ಯಕ್ಷ ಗೇರುಬೈಲು ನಟರಾಜ್, ಮುಖಂಡರಾದ ಕೆ.ಎಂ.ಸುಂದರೇಶ್, ಅಬೂಬಕರ್, ಉಪೇಂದ್ರ, ಸುನಿಲ್ ಕುಮಾರ್, ಎಲ್ದೋಸ್, ಏಲಿಯಾಸ್, ವಿಜು, ನಿಥಿನ್, ಸತೀಶ್, ಮಂಜು,ನರೇಂದ್ರ, ಸಾಜು, ಪ್ರಶಾಂತ್ ಶೆಟ್ಟಿ, ಜುಬೇದಾ, ಮೂರ್ತಿ, ಮಾಳೂರು ದಿಣ್ಣೆರಮೇಶ್, ಹೊನಗಾರ್ ರಮೇಶ್, ಸಂತೋಷ್, ಈ.ಸಿ.ಜೋಯಿ ಮತ್ತಿತರರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT