ಉಡುಪಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಮಂಡಿಸಿದ ಬಜೆಟ್ಗೆ ಜಿಲ್ಲೆಯಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಬೃಹತ್ ಶೂನ್ಯ: ‘ಪ್ರಸಕ್ತ ಸಾಲಿನ ರಾಜ್ಯ ಬಜೆಟ್ನ ಒಟ್ಟಾರೆ ಹೂರಣ ಬೃಹತ್ ಶೂನ್ಯವಾಗಿದೆ’ ಎಂದು ಶಾಸಕ ವಿ. ಸುನಿಲ್ ಕುಮಾರ್ ಹೇಳಿದ್ದಾರೆ. ‘ಹೊಸ ಹೊಸ ಪದಪುಂಜಗಳನ್ನು ಹೊಸೆಯುವುದಕ್ಕೆ ಸಿದ್ದರಾಮಯ್ಯನವರು ನೀಡಿದ ಆದ್ಯತೆಯನ್ನು ಹೊಸ ಹೊಸ ಯೋಜನೆಗಳ ಸೃಷ್ಟಿಗೆ ನೀಡದೇ ಇರುವುದು ರಾಜ್ಯದ ದೌರ್ಭಾಗ್ಯ. ಈ ಬಾರಿಯ ಬಜೆಟ್ ಅನ್ನು 11 ಜಿ ಮಾದರಿಯಲ್ಲಿ ರೂಪಿಸಲಾಗಿದೆ ಎಂದು ಸಿದ್ದರಾಮಯ್ಯನವರು ಹೇಳಿದ್ದಾರೆ. ಆದರೆ ಇಲಾಖಾವಾರು ಬಜೆಟ್ ವಿಶ್ಲೇಷಣೆ ನಡೆಸಿದಾಗ ಇದು 11 ಜಿ ಬಜೆಟ್ಗೆ ಬದಲಾಗಿದೆ 11 ಲೈ (ಹನ್ನೊಂದು ಸುಳ್ಳು) ಬಜೆಟ್ ಆಗಿದೆ’ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

‘ಬಜೆಟ್ನ ಪ್ರತಿಪುಟವನ್ನು ಹುಡುಕಿದರೂ ಕರಾವಳಿ ಭಾಗದ ಅಭಿವೃದ್ಧಿಗೆ ಪೂರಕವಾದ ಒಂದೇ ಒಂದು ಅಂಶಗಳು ಇಲ್ಲ. ಹೊಸ ವೈದ್ಯಕೀಯ ಕಾಲೇಜು ಬೇಡಿಕೆ ಈಡೇರಿಲ್ಲ. ಪಶ್ಚಿಮ ವಾಹಿನಿ ಯೋಜನೆಗಳಿಗೆ ಬಿಡಿಕಾಸು ಕೊಟ್ಟಿಲ್ಲ. ನಗರಾಭಿವೃದ್ಧಿ ಯೋಜನೆಗಳು ಬೆಂಗಳೂರು ಬಿಟ್ಟು ಆಚೆ ಬರದೇ ಇರುವುದು ಈ ಸರ್ಕಾರದ ಬಿಯಾಂಡ್ ಬೆಂಗಳೂರು ಯೋಜನೆಯ ಬದ್ಧತೆಯನ್ನು ಪ್ರದರ್ಶಿಸುತ್ತದೆ’ ಎಂದಿದ್ದಾರೆ. ಕರಾವಳಿಯ ಸಮಗ್ರ ಅಭಿವೃದ್ಧಿ ಪ್ರತ್ಯೇಕ ಕೈಗಾರಿಕಾ ಕ್ಲಸ್ಟರ್, ಪ್ರವಾಸೋದ್ಯಮದ ಬಗ್ಗೆ ಸ್ಪಷ್ಟತೆ, ಐಟಿ ಹೂಡಿಕೆ ಇತ್ಯಾದಿ ವಿಚಾರಗಳನ್ನು ನಾವು ನಿರೀಕ್ಷೆ ಮಾಡಿದ್ದೆವು. ಹೀಗಾಗಿ ಇದು ಕರಾವಳಿ ವಿರೋಧಿ ಬಜೆಟ್’ ಎಂದಿದ್ದಾರೆ.

‘ಕರಾಳ ಬಜೆಟ್’: ‘ಈ ಬಾರಿಯ ಬಜೆಟ್ ಕರಾವಳಿ ಜನರ ಪಾಲಿಗೆ ಕರಾಳ ಬಜೆಟ್. ಕರಾವಳಿ ಜಿಲ್ಲೆಯನ್ನು ಸಂಪೂರ್ಣ ಹೊರಗಿಟ್ಟು ತಮ್ಮ ನಿರಂತರ ಕಡೆಗಣನೆ ಮುಂದುವರಿಸಿದ್ದಾರೆ’ ಎಂದು ಶಾಸಕ ಯಶ್ಪಾಲ್ ಸುವರ್ಣ ಪ್ರತಿಕ್ರಿಯಿಸಿದ್ದಾರೆ.

‘ಕರ್ನಾಟಕ ಭೂಪಟದಲ್ಲಿ ಉಡುಪಿ ಜಿಲ್ಲೆಯ ಅಸ್ತಿತ್ವವನ್ನೇ ಮುಖ್ಯಮಂತ್ರಿ ಸಿದ್ದರಾಮಯ್ಯ ಮರೆತಿದ್ದು, ಜಿಲ್ಲೆಯ ಆರೋಗ್ಯ, ಶಿಕ್ಷಣ, ಧಾರ್ಮಿಕ, ಮೀನುಗಾರಿಕೆ, ಪ್ರವಾಸೋದ್ಯಮ ಸಹಿತ ಮೂಲ ಸೌಕರ್ಯಗಳ ಬಗ್ಗೆ ಜಿಲ್ಲೆಯ ಜನತೆಯ ನಿರೀಕ್ಷೆಗೆ ಬಜೆಟ್ನಲ್ಲಿ ತಣ್ಣೀರು ಎರಚಿದ್ದಾರೆ’ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

‘ಅಭಿವೃದ್ಧಿ ಚಿಂತನೆಯ ಬಜೆಟ್’: ‘ಆರೋಗ್ಯ , ಶಿಕ್ಷಣ, ಧಾರ್ಮಿಕ ಕ್ಷೇತ್ರಗಳಿಗೆ ಒತ್ತು ನೀಡಿ ಎಲ್ಲಾ ಸಮುದಾಯಗಳ ಅಭಿವೃದ್ಧಿಗೆ ಯೋಜನೆಗಳು, ಕರಾವಳಿ ಪ್ರವಾಸೋದ್ಯಮ ಅಭಿವೃದ್ಧಿಗೆ ಯೋಜನೆಗಳು , ಕುಕ್ಕೆ ಸುಬ್ರಹ್ಮಣ್ಯ, ಕೊಲ್ಲೂರು ದೇವಸ್ಥಾನಗಳ ಅಭಿವೃದ್ಧಿಗೆ ಪ್ರಾಧಿಕಾರವನ್ನು ಬಜೆಟ್ನಲ್ಲಿ ಘೋಷಿಸುವ ಮೂಲಕ ಅಭಿವೃದ್ಧಿ ಚಿಂತನೆಯ ಬಜೆಟ್ ಮಂಡಿಸಲಾಗಿದೆ’ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಹೇಳಿದ್ದಾರೆ.

ಶಾಲೆಗಳ ಉನ್ನತೀಕರಣ, ಅನಂತಮೂರ್ತಿ ಹಾಗೂ ಕುವೆಂಪು ಹೆಸರಲ್ಲಿ ಅಧ್ಯಯನ ಪೀಠ, ಮೀನುಗಾರಿಕಾ ಸಲಕರಣೆ ಕಿಟ್ ದರ ಹೆಚ್ಚಳ. ದ.ಕ., ಉಡುಪಿ , ಉತ್ತರಕನ್ನಡ ಹಾಗೂ ಬಾಗಲಕೋಟೆಗಳಲ್ಲಿ ಮೀನು ಮಾರುಕಟ್ಟೆ ನಿರ್ಮಾಣ ಹೀಗೆ ಎಲ್ಲಾ ವರ್ಗಗಳನ್ನು ಬಜೆಟ್ನಲ್ಲಿ ಪರಿಗಣಿಸಲಾಗಿದೆ’ ಎಂದು ಅವರು ಹೇಳಿಯಲ್ಲಿ ತಿಳಿಸಿದ್ದಾರೆ.

‘ಸಮತೋಲನದ ಬಜೆಟ್’: ‘ಮನೆ ಹಂಚಿಕೆಯಲ್ಲಿ ಸಾಮಾನ್ಯ ವರ್ಗಕ್ಕೆ ಸಹಾಯ ಧನ ಏರಿಕೆ, ಕೃಷಿಕರಿಗೆ ಶೂನ್ಯ ಬಡ್ಡಿ ಸಾಲ ಯೋಜನೆ, ಅನ್ನಭಾಗ್ಯ, ಗೃಹಲಕ್ಷ್ಮಿ, ಶಕ್ತಿ ಯೋಜನೆ, ಗೃಹ ಜ್ಯೋತಿ ಯೋಜನೆಗಳಿಗೆ ಅನುದಾನ ಬಿಡುಗಡೆ, ವಿವಿಧ ಜಿಲ್ಲೆಗಳಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ಸಿಲ್ಕ್ ಪಾರ್ಕ್, ಟ್ರಾಮಾ ಸೆಂಟರ್ಗಳ ನಿರ್ಮಾಣ ಹೀಗೆ ಎಲ್ಲ ರೀತಿಯಲ್ಲೂ ಸಮತೋಲನದ ಬಜೆಟ್ ಇದಾಗಿದೆ’ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ವಕ್ತಾರ ಭಾಸ್ಕರ್ ರಾವ್ ಕಿದಿಯೂರು ಪ್ರತಿಕ್ರಿಯಿಸಿದ್ದಾರೆ.

ಅತ್ಯುತ್ತಮ ಬಜೆಟ್: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಅತ್ಯುತ್ತಮ ಬಜೆಟ್ ಮಂಡಿಸಿದ್ದಾರೆ. 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ನಿಷೇಧ, ಬೆಂಗಳೂರಿನಲ್ಲಿ 2ನೇ ವಿಮಾನ ನಿಲ್ದಾಣ, ಕರಾವಳಿ ಜಿಲ್ಲೆಗೆ ಪ್ರವಾಸೋದ್ಯಮಕ್ಕೆ ವಿಶೇಷ ಯೋಜನೆ ಮಾಡಿರುವುದು. ಗ್ಯಾರಂಟಿ ಯೋಜನೆಗಳನ್ನು ಉಳಿಸಿಕೊಂಡು ಶಿಕ್ಷಣ, ಆರೋಗ್ಯ, ಕೃಷಿ ಕ್ಷೇತ್ರಕ್ಕೆ ಹೆಚ್ಚು ಅನುದಾನ ನೀಡಿ ಪ್ರೋತ್ಸಾಹಿಸಲಾಗಿದೆ. 56 ಸಾವಿರ ಸರ್ಕಾರಿ ಉದ್ಯೋಗ ಭರ್ತಿ, ಬೆಂಗಳೂರಿಗೆ 40 ಕಿ.ಮೀ. ಸುರಂಗ ಮಾರ್ಗ ಯೋಜನೆ ಮಹತ್ವದ್ದಾಗಿದೆ ಎಂದು ಕೆಪಿಸಿಸಿ ಸದಸ್ಯ ಹೆಬ್ರಿ ನೀರೆ ಕೃಷ್ಣ ಶೆಟ್ಟಿ ಹೇಳಿದ್ದಾರೆ..

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260307-28-1381728587

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.