ಬೆಂಗಳೂರಿನ ಕಾಲೇಜೊಂದರಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಪ್ರಾಧ್ಯಾಪಕಿಯೊಬ್ಬರು ಭರ್ಜರಿಯಾಗಿ ನೃತ್ಯ ಮಾಡಿದ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ವಿದ್ಯಾರ್ಥಿಗಳು ಮತ್ತು ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನಲ್ಲಿರುವ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಈ ನೃತ್ಯವನ್ನು ಮಾಡಲಾಗಿದೆ. ಇಲ್ಲಿನ ಗಣಿತ ವಿಭಾಗದಲ್ಲಿ ಕೆಲಸ ಮಾಡುತ್ತಿರುವ ಪ್ರಾಧ್ಯಾಪಕಿ ಪ್ರಿಯದರ್ಶಿನಿ ಶಿವರಾಮು ಅವರು ಕಾರ್ಯಕ್ರಮದಲ್ಲಿ ‘ಮುಕ್ಕಾಲ ಮುಕ್ಕಾಬುಲ್ಲಾ ಲೈಲಾ…’ ಎಂಬ ಹಾಡಿಗೆ ನೃತ್ಯ ಮಾಡಿದ್ದಾರೆ. ಇವರ ಅದ್ಭುತ ನೃತ್ಯಕ್ಕೆ ಸಾಮಾಜಿಕ ಮಾಧ್ಯಮದಲ್ಲಿ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಪ್ರಿಯದರ್ಶಿನಿ ಶಿವರಾಮು ಅವರು ಸಾಮಾಜಿಕ ಮಾಧ್ಯಮದಲ್ಲಿ ನೃತ್ಯದ ತುಣುಕನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೊದಲ್ಲಿ ತನ್ನ ಸಹಚರರೊಂದಿಗೆ ಕಪ್ಪು ಕೂಲಿಂಗ್ ಗ್ಲಾಸ್ ಧರಿಸಿ ವಿಭಿನ್ನವಾಗಿ ಕ್ಲಾಸಿಕಲ್ ಹಾಡಿಗೆ ಡ್ಯಾನ್ಸ್ ಮಾಡಿದ್ದಾರೆ. ಸದ್ಯ ಸಾಮಾಜಿಕ ಮಾಧ್ಯಮದ ಬಳಕೆದಾರರು ಇವರ ನೃತ್ಯಕ್ಕೆ ಫಿದಾ ಆಗಿದ್ದಾರೆ.

ಬಳಕೆದಾರರೊಬ್ಬರು ‘ಮೇಡಂ ನೀವು ಯಾವಾಗಲೂ ಅದ್ಭುತ’ ಎಂದು ಕಾಮೆಂಟ್ ಮಾಡಿದ್ದಾರೆ. ಮತ್ತೊಬ್ಬರು ‘ನೀವು ಪಾಠ ಮಾತ್ರವಲ್ಲ, ನೃತ್ಯವನ್ನೂ ಚೆನ್ನಾಗಿ ಮಾಡುತ್ತೀರ, ನೀವು ಆಲ್ರೌಂಡರ್ ಮೇಡಂ’ ಎಂದು ಬರೆದಿದ್ದಾರೆ. ಇತರರು ಅವರ ನೃತ್ಯವನ್ನು ಕರಾಟೆ ಮತ್ತು ಬಾಕ್ಸಿಂಗ್ಗೆ ಹೋಲಿಸಿದ್ದಾರೆ.

ಸದ್ಯ ಈ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹರಿದಾಡುತ್ತಿದ್ದು 37 ಸಾವಿರಕ್ಕೂ ಹೆಚ್ಚು ವೀಕ್ಷಣೆ ಪಡೆದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.