ಗ್ರ್ಯಾಂಡ್ ಚುಟೆ (ಅಮೆರಿಕ): ಉತ್ತರ ವಿಸ್ಕಾನ್‌ಸಿನ್ ನಗರದ ಮಾಲ್‌ವೊಂದರಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಭಾನುವಾರ ಗುಂಡಿನ ದಾಳಿ ನಡೆಸಿದ್ದಾನೆ. ಇದರಲ್ಲಿ ಒಬ್ಬ ವ್ಯಕ್ತಿ ಮೃತಪಟ್ಟಿದ್ದು, ಇನ್ನೊಬ್ಬರಿಗೆ ಗಾಯಗಳಾಗಿವೆ ಎಂದು ಅಧಿಕಾರಿಗಳು ತಿಳಿಸಿದರು.

ಗ್ರ್ಯಾಂಡ್ ಚುತೆಯಲ್ಲಿರುವ ಫಾಕ್ಸ್ ರಿವರ್ ಮಾಲ್‌ನಲ್ಲಿ ಭಾನುವಾರ ಸಂಜೆ ಈ ಘಟನೆ ನಡೆದಿದ್ದು, ಪೊಲೀಸರು 3.30 ರ ಸುಮಾರಿಗೆ ಸ್ಥಳಕ್ಕೆ ಆಗಮಿಸಿದ್ದಾರೆ. ಆದರೆ ಅಷ್ಟರಲ್ಲಿ ದಾಳಿಕೋರ ಸ್ಥಳದಿಂದ ಪರಾರಿಯಾಗಿದ್ದಾನೆ.

‘ಈ ಬಗ್ಗೆ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ. ಈ ದಾಳಿಯ ಹಿಂದಿನ ಉದ್ದೇಶ ಇನ್ನೂ ತಿಳಿದುಬಂದಿಲ್ಲ’ ಎಂದು ಪೊಲೀಸ್ ಅಧಿಕಾರಿ ಟ್ರಾವಿಸ್ ವಾಸ್ ಅವರು ತಿಳಿಸಿದರು.

ಇದು ವಿಸ್ಕಾನ್‌ಸಿನ್‌ನಲ್ಲಿ ನಡೆದ ಎರಡನೇ ಮಾಲ್ ದಾಳಿಯಾಗಿದೆ. ಕಳೆದ ವರ್ಷ ನವೆಂಬರ್‌ನಲ್ಲಿ ಕೂಡ ಮಾಲ್‌ವೊಂದರಲ್ಲಿ ದಾಳಿ ನಡೆಸಲಾಗಿತ್ತು. ಇದರಲ್ಲಿ 8 ಮಂದಿ ಗಾಯಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.