ಬ್ಯಾಂಕಾಕ್: ‘ಮ್ಯಾನ್ಮಾರ್ನಲ್ಲಿ ಸೇನೆಯು ಅಧಿಕಾರದ ಚುಕ್ಕಾಣಿ ಹಿಡಿದು 100 ದಿನಗಳು ಪೂರೈಸಿದ್ದು, ಎಲ್ಲವೂ ತನ್ನ ನಿಯಂತ್ರಣದಲ್ಲಿದೆ ಎಂಬುದನ್ನು ತೋರಿಸಲು ಪ್ರಯತ್ನಿಸುತ್ತಿದೆ. ಆದರೆ ಈವರೆಗೆ ಒಂದು ರೈಲನ್ನು ಕೂಡ ಸಮಯಕ್ಕೆ ಸರಿಯಾಗಿ ಚಲಿಸುವಂತೆ ಮಾಡಲು ಸೇನೆಗೆ ಸಾಧ್ಯವಾಗಿಲ್ಲ’ ಎಂದು ಅಲ್ಲಿನ ನಾಗರಿಕರು ದೂರಿದ್ದಾರೆ.

ಫೆಬ್ರುವರಿ 1 ರಂದು ನಾಯಕಿ ಆಂಗ್ ಸಾನ್ ಸೂಕಿ ನೇತೃತ್ವದ ಚುನಾಯಿತ ಸರ್ಕಾರದ ವಿರುದ್ಧ ದಂಗೆ ಎದ್ದಿದ್ದ ಮ್ಯಾನ್ಮಾರ್ ಸೇನೆಯು ಅಧಿಕಾರವನ್ನು ತನ್ನ ಹಿಡಿತಕ್ಕೆ ತೆಗೆದುಕೊಂಡಿತ್ತು.

ಈ ಬಳಿಕ ದೇಶದ ರೈಲ್ವೆ ಕಾರ್ಯಕರ್ತರು ಸೇರಿದಂತೆ ಹಲವಾರು ಮಂದಿ ಮಿಲಿಟರಿ ಆಡಳಿತದ ವಿರುದ್ಧ ಪ್ರತಿಭಟಿಸಲು ಆರಂಭಿಸಿದರು. ಸೇನೆಯು ಬಲ ಪ್ರಯೋಗಿಸುವ ಮೂಲಕ ಜನರು ರಸ್ತೆಗಿಳಿದು ಪ್ರತಿಭಟಿಸದಂತೆ ತಡೆಯುವಲ್ಲಿ ಭಾಗಶಃ ಸಫಲವಾಗಿದೆ. ಸ್ವತಂತ್ರ ಮಾಧ್ಯಮಗಳನ್ನು ಕಾರ್ಯನಿರ್ವಹಿಸದಂತೆ ನಿರ್ಬಂಧಿಸಿದೆ. ಆದರೆ ಈಗಲೂ ಮ್ಯಾನ್ಮಾರ್ನಲ್ಲಿ ಅಸಹಕಾರ ಚಳವಳಿ ಜಾರಿಯಲ್ಲಿದೆ ಎಂದು ಅಲ್ಲಿನ ನಾಗರಿಕರು ಹೇಳಿದ್ದಾರೆ.

‘ಈ ಅಸಹಕಾರ ಚಳವಳಿಯನ್ನು ಆರಂಭಿಸಿದ ಆರೋಗ್ಯ ಕಾರ್ಯಕರ್ತರು ಸರ್ಕಾರಿ ಆರೋಗ್ಯ ಕೇಂದ್ರಗಳಲ್ಲಿ ಕೆಲಸವನ್ನು ತಿರಸ್ಕರಿಸಿದ್ದಾರೆ. ಹಲವು ನಾಗರಿಕ ಅಧಿಕಾರಿಗಳು, ಸರ್ಕಾರಿ ಮತ್ತು ಖಾಸಗಿ ಬ್ಯಾಂಕ್ಗಳ ಸಿಬ್ಬಂದಿಯು ಕೆಲಸಕ್ಕೆ ಗೈರು ಹಾಜರಾಗುವ ಮೂಲಕ ತಮ್ಮ ವಿರೋಧ ವ್ಯಕ್ತಪಡಿಸಿದ್ದಾರೆ. ಶಿಕ್ಷಕರು, ವಿದ್ಯಾರ್ಥಿಗಳು ಮತ್ತು ಪೋಷಕರು ಸರ್ಕಾರಿ ಕಾಲೇಜುಗಳನ್ನು ಬಹಿಷ್ಕರಿಸಿದ್ದಾರೆ’ ಎಂದು ಮೂಲಗಳು ತಿಳಿಸಿವೆ.

‘ಮ್ಯಾನ್ಮಾರ್ನಲ್ಲಿ ಸೇನಾ ಆಡಳಿತವನ್ನು ವಿರೋಧಿಸಿ ನಡೆದ ಪ್ರತಿಭಟನೆಯಲ್ಲಿ 750 ಕ್ಕೂ ಹೆಚ್ಚು ಜನರು ಹತರಾಗಿದ್ದಾರೆ’ ಎಂದು ಮೂಲಗಳು ಹೇಳಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.