ಮಂಗಳವಾರ, 18 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಟರ್ಬುಲೆನ್ಸ್‌ಗೆ ಸಿಲುಕಿದ ಕತಾರ್ ಏರ್‌ವೇಸ್ ವಿಮಾನ: 12 ಮಂದಿಗೆ ಗಾಯ

Published 27 ಮೇ 2024, 2:11 IST
Last Updated 27 ಮೇ 2024, 2:11 IST
ಅಕ್ಷರ ಗಾತ್ರ

ಲಂಡನ್: ಭಾನುವಾರ ದೋಹಾದಿಂದ ಡಬ್ಲಿನ್‌ಗೆ ತೆರಳುತ್ತಿದ್ದ ಕತಾರ್ ಏರ್‌ವೇಸ್ ವಿಮಾನ ಟರ್ಬುಲೆನ್ಸ್‌ಗೆ (ಗಾಳಿಯ ಏರುಪೇರಿನಿಂದ ಆಗುವ ಕ್ಷೋಭೆ) ಸಿಲುಕಿ 12 ಜನ ಗಾಯಗೊಂಡಿದ್ದಾರೆ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ.

6 ಪ್ರಯಾಣಿಕರು ಮತ್ತು 6 ಸಿಬ್ಬಂದಿಯಿದ್ದ ವಿಮಾನವು ಟರ್ಕಿಗೆ ಸಾಗುತ್ತಿದ್ದಾಗ ತೀವ್ರ ಟರ್ಬುಲೆನ್ಸ್‌ಗೆ ತುತ್ತಾಗಿದೆ. ಈ ವೇಳೆ 12 ಮಂದಿಗೆ ಗಾಯಗಳಾಗಿವೆ ಎಂದು ಡಬ್ಲಿನ್ ವಿಮಾನ ನಿಲ್ದಾಣ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ವಿಮಾನ ಸುರಕ್ಷಿತವಾಗಿ ಇಳಿದ ಬಳಿಕ ವಿಮಾನ ನಿಲ್ದಾಣದ ಪೊಲೀಸರು, ಅಗ್ನಿಶಾಮಕ ಮತ್ತು ರಕ್ಷಣಾ ಇಲಾಖೆ ಸೇರಿದಂತೆ ತುರ್ತು ಸೇವೆಗಳು ಪ್ರಯಾಣಿಕರಿಗೆ ನೆರವಾದರು. ಬಳಿಕ 8 ಪ್ರಯಾಣಿಕರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

'ವಿಮಾನದಲ್ಲಿದ್ದ ಪ್ರಯಾಣಿಕರು ಮತ್ತು ಸಿಬ್ಬಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ' ಎಂದು ಕತಾರ್ ಏರ್‌ವೇಸ್ ತಿಳಿಸಿದೆ.

ಕಳೆದ 5 ದಿನಗಳ ಹಿಂದೆ ಸಿಂಗಪುರ ಏರ್‌ಲೈನ್ಸ್ ಕಂಪನಿಯ ವಿಮಾನವೊಂದು ಹಿಂದೂ ಮಹಾಸಾಗರದ ಮೇಲೆ ಸಾಗುತ್ತಿದ್ದಾಗ ತೀವ್ರ ಟರ್ಬುಲೆನ್ಸ್‌ಗೆ ಸಿಲುಕಿ, ಮೂರೇ ನಿಮಿಷಗಳ ಅವಧಿಯಲ್ಲಿ ಆರು ಸಾವಿರ ಅಡಿಗಳಷ್ಟು ಕೆಳಕ್ಕೆ ಕುಸಿದಿತ್ತು. ಇದರ ಪರಿಣಾಮವಾಗಿ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಬ್ರಿಟನ್‌ ಪ್ರಜೆಯೊಬ್ಬರು ಮೃತಪಟ್ಟಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT