ಕಿನ್ಶಾಸಾ: ಕಾಂಗೋದರಾಜಧಾನಿ ಕಿನ್ಶಾಸಾದ ಮಕಾಲಾ ಕೇಂದ್ರ ಕಾರಾಗೃಹದಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸುತ್ತಿದ್ದ ಕನಿಷ್ಠ 129 ಜನ ಮೃತಪಟ್ಟಿದ್ದಾರೆ ಎಂದು ಡೆಮಾಕ್ರಟಿಕ್ ರಿಪಬ್ಲಿಕ್ ಆಫ್ ಕಾಂಗೋ ಸರ್ಕಾರ ಹೇಳಿದೆ.
ಈ ಬಗ್ಗೆ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಸಚಿವ ಶಬಾನಿ ಲುಕೂ ಮಾಹಿತಿ ಹಂಚಿಕೊಂಡಿದ್ದಾರೆ. 'ಭಾನುವಾರ ತಡರಾತ್ರಿ ಮಕಾಲಾ ಕೇಂದ್ರ ಕಾರಾಗೃಹದಲ್ಲಿ ತಪ್ಪಿಸಿಕೊಳ್ಳುವ ಪ್ರಯತ್ನಿಸಿದಾಗ ಗುಂಡಿನ ದಾಳಿ ನಡೆದಿದೆ. ಈ ವೇಳೆ ನೂಕು ನುಗ್ಗಲು ಉಂಟಾಗಿದ್ದು, ಸುಮಾರು 129 ಮಂದಿ ಸಾವಿಗೀಡಾಗಿದ್ದಾರೆ.
129 ಮಂದಿಯಲ್ಲಿ 24 ಮಂದಿ ಗುಂಡೇಟಿನಿಂದ ಮೃತರಾಗಿದ್ದಾರೆ. ಉಳಿದವರು ಉಸಿರುಗಟ್ಟಿ ಸಾವಿಗೀಡಾಗಿದ್ದಾರೆ. ಜೈಲಿನ ಕಟ್ಟಡ, ಆಹಾರ ಡಿಪೋಗಳು ಮತ್ತು ಆಸ್ಪತ್ರೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಸುಮಾರು 59 ಜನ ಗಾಯಗೊಂಡಿದ್ದಾರೆ ಎಂದು ಅವರು ತಿಳಿಸಿದ್ದಾರೆ.
Suite à la tentative d'évasion survenue ce lundi entre 2h et 4h du matin, le Gouvernement a tenu une Réunion de crise, élargie aux Services, à mon cabinet de travail pic.twitter.com/Nc5fCVozJV
ಭಾನುವಾರ ತಡರಾತ್ರಿ 2:00 ಗಂಟೆಗೆ (ಸ್ಥಳೀಯ ಕಾಲಮಾನ) ಕೈದಿಗಳು ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದಾರೆ. ಈ ವೇಳೆ ಭಾರಿ ಗುಂಡಿನ ಸದ್ದು ಕೇಳಿ ಬಂದಿದೆ. ಯಾವುದೇ ಕೈದಿ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿಲ್ಲ ಎಂದು ಜೈಲು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.