ಸೋಮವಾರ, 17 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾಕಿಸ್ತಾನದಲ್ಲಿ ರಸ್ತೆ ಅಪಘಾತ: ಒಂದೇ ಕುಟುಂಬದ 13 ಮಂದಿ ಸಾವು

Published 27 ಮೇ 2024, 14:03 IST
Last Updated 27 ಮೇ 2024, 14:03 IST
ಅಕ್ಷರ ಗಾತ್ರ

ಲಾಹೋರ್: ಪಾಕಿಸ್ತಾನಕ್ಕೆ ಸೇರಿದ ಪಂಜಾಬ್ ಪ್ರದೇಶದ ವ್ಯಾಪ್ತಿಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ನಾಲ್ವರು ಮಹಿಳೆಯರು, ಮೂವರು ಮಕ್ಕಳು ಸೇರಿ 13 ಮಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ. 

ಮಜಫ್ಫರಗಢ ಜಿಲ್ಲೆಯಲ್ಲಿ ಭಾನುವಾರ ಟ್ರಕ್‌ಗೆ ವ್ಯಾನ್ ಡಿಕ್ಕಿ ಹೊಡೆದಿದ್ದರಿಂದ ಅವಘಡ ಸಂಭವಿಸಿದೆ. ಮೃತರೆಲ್ಲರೂ ಒಂದೇ ಕುಟುಂಬಕ್ಕೆ ಸೇರಿದವರಾಗಿದ್ದಾರೆ ಎಂದು ಹೇಳಿದ್ದಾರೆ. 

ಮುಲ್ತಾನ್‌ನಲ್ಲಿರುವ ಸಂಬಂಧಿಕರನ್ನು ನೋಡಲು ಪ್ರಯಾಣಿಕರು ತೆರಳುತ್ತಿದ್ದಾರೆ ಅಪಘಾತವಾಗಿದೆ. ಟ್ರಕ್‌ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT