ಶುಕ್ರವಾರ, 24 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಲ್ಜಿಯಂ: ಬಾಲಕಿಯ ಮೇಲೆ 10 ಮಂದಿ ಅಪ್ರಾಪ್ತರಿಂದ ಸಾಮೂಹಿಕ ಅತ್ಯಾಚಾರ

Published 10 ಮೇ 2024, 10:29 IST
Last Updated 10 ಮೇ 2024, 10:29 IST
ಅಕ್ಷರ ಗಾತ್ರ

ಬ್ರಸೆಲ್ಸ್: 14 ವರ್ಷದ ಬಾಲಕಿಯ ಮೇಲೆ 10 ಮಂದಿ ಅಪ್ರಾಪ್ತರು ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಬೆಲ್ಜಿಯಂನ ವೆಸ್ಟ್ ಫ್ಲಾಂಡರ್ಸ್ ಪ್ರಾಂತ್ಯದ ಅರಣ್ಯದಲ್ಲಿ ನಡೆದಿದೆ. ಎಲ್ಲಾ ಆರೋಪಿಗಳು 11ರಿಂದ 16ರ ನಡುವಿನ ವಯಸ್ಸಿನವರು ಎನ್ನಲಾಗಿದೆ.

ಈ ಬಗ್ಗೆ ಎನ್‌ಡಿಟಿವಿ ವರದಿ ಮಾಡಿದೆ.

ಕೊರ್ಟ್ರಿಜ್‌ ನಗರದಲ್ಲಿ ಬಾಲಕಿ ತನ್ನ ಗೆಳೆಯನೊಂದಿಗೆ ಹೊರಗಡೆ ತೆರಳಿದ್ದಳು. ಅಲ್ಲಿಗೆ ಆತನ ಹಲವು ಸ್ನೇಹಿತರು ಬಂದಿದ್ದರು. ಏಪ್ರಿಲ್​ 2 ಹಾಗೂ ಏಪ್ರಿಲ್​ 6ರ ನಡುವೆ 10 ಮಂದಿ ಅಪ್ರಾಪ್ತರು ಕಾಡಿಗೆ ಕರೆದೊಯ್ದು ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ. ಅಲ್ಲದೇ ಘಟನೆಯನ್ನು ಚಿತ್ರೀಕರಿಸಿ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಾರೆ. ಆರೋಪಿಗಳಲ್ಲಿ ಓರ್ವ ಬಾಲಕನಿಗೆ 11 ವರ್ಷ. ಹಾಗಾಗಿ ಹೆಚ್ಚಿನ ಮಾಹಿತಿ ನೀಡಲು ಸಾಧ್ಯವಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಸದ್ಯ ಬಾಲಕಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಆರೋಪಿಗಳನ್ನು ಬಂಧಿಸಲಾಗಿದ್ದು, ಬಾಲಾಪರಾಧ ನ್ಯಾಯಾಲಯ ಕ್ರಮ ಕೈಗೊಂಡಿದೆ.

ಕಳೆದ ಮೂರು ವರ್ಷಗಳ ಹಿಂದೆ ಈಸ್ಟ್ ಫ್ಲಾಂಡರ್ಸ್‌ನ ಗೆಂಟ್‌ನಲ್ಲಿ ಇದೇ ರೀತಿಯ ಘಟನೆ ನಡೆದಿತ್ತು. 14 ವರ್ಷದ ಬಾಲಕಿಯ ಮೇಲೆ ಯುವಕರ ಗುಂಪೊಂದು ಅತ್ಯಾಚಾರವೆಸಗಿತ್ತು. ಈಗ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದ್ದು, ದೇಶವನ್ನು ಬೆಚ್ಚಿಬೀಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT