ಕಾಬೂಲ್: ಅಫ್ಗಾನಿಸ್ತಾನ ತೊರೆಯಲೆಂದು ಕಾಬೂಲ್ ವಿಮಾನ ನಿಲ್ದಾಣದ ಕಡೆಗೆ ಹೊರಟಿದ್ದ ಭಾರತೀಯರು ಸೇರಿದಂತೆ 150 ಮಂದಿಯನ್ನು ತಾಲಿಬಾನ್ ಉಗ್ರರು ಅಪಹರಿಸಿದ್ದಾರೆ ಎಂದು ಸ್ಥಳೀಯ ಸುದ್ದಿ ವಾಹಿನಿಗಳು ವರದಿ ಬಿತ್ತರಿಸಿವೆ.

ಅಫ್ಗಾನಿಸ್ತಾನದ ವರದಿಯ ಆಧಾರದಲ್ಲಿ ಸುದ್ದಿ ಸಂಸ್ಥೆ ಶನಿವಾರ ವರದಿ ಪ್ರಕಟಿಸಿದೆ.

ಅಪಹರಣಕ್ಕೊಳಗಾದವರಲ್ಲಿ ಬಹುತೇಕರು ಭಾರತೀಯರಾಗಿದ್ದಾರೆ ಎಂದು ಅಲ್ಲಿನ ಸ್ಥಳೀಯ ಸುದ್ದಿ ವಾಹಿನಿಗಳು ವರದಿ ಮಾಡಿವೆ. ಅಷ್ಟೇ ಅಲ್ಲದೆ, ಅಫ್ಗಾನಿಸ್ತಾನದ ಹಲವು ಪತ್ರಕರ್ತರು ತಮ್ಮ ಟ್ವಿಟರ್ ಖಾತೆಗಳಲ್ಲಿ ಟ್ವೀಟ್ ಮಾಡಿ ಮಾಹಿತಿ ಹಂಚಿಕೊಂಡಿದ್ದಾರೆ.

ಆದರೆ, ಈ ಸುದ್ದಿಯನ್ನು ತಾಲಿಬಾನ್ನ ವಕ್ತಾರ ಅಹಮದುಲ್ಲಾ ವಾಸಖ್ ನಿರಾಕರಿಸಿದ್ದಾರೆ. ಸುದ್ದಿ ಮಾಧ್ಯಮಗಳಿಗೆ ಈ ವಿಚಾರವನ್ನು ಅವರು ತಿಳಿಸಿದ್ದಾರೆ.

ಇತ್ತೀಚಿನ ಮಾಹಿತಿಗಳ ಪ್ರಕಾರ, ದಾಖಲೆ ಪರಿಶೀಲಿಸಲು 150 ಮಂದಿಯನ್ನು ಕರೆದೊಯ್ಯಲಾಗಿತ್ತು ಎಂದು ಹೇಳಲಾಗಿದೆ.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ...

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.