ಕೊಲಂಬೊ: ‘ಗಡಿ ದಾಟಿ ಅಕ್ರಮವಾಗಿ ಮೀನುಗಾರಿಕೆಯಲ್ಲಿ ತೊಡಗಿದ್ದ 17 ಮಂದಿ ಭಾರತೀಯ ಮೀನುಗಾರರನ್ನು ಶ್ರೀಲಂಕಾ ನೌಕಾಪಡೆಯು ಬಂಧಿಸಿದ್ದು, ದ್ವೀಪರಾಷ್ಟ್ರದಲ್ಲಿ ಈ ವರ್ಷ ಬಂಧನಕ್ಕೆ ಒಳಗಾದ ಭಾರತೀಯ ಮೀನುಗಾರರ ಸಂಖ್ಯೆ 413ಕ್ಕೆ ಏರಿಕೆಯಾಗಿದೆ’ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಇಲ್ಲಿನ ಉತ್ತಮ ಮನ್ನಾರ್‌ನಲ್ಲಿ ಮೀನುಗಾರರನ್ನು ಬಂಧಿಸಿದ್ದು, ಬೋಟ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಶ್ರೀಲಂಕಾ ನೌಕಾಪಡೆಯು ಬಿಡುಗಡೆಗೊಳಿಸಿದ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.
‘ಶ್ರೀಲಂಕಾ ನೌಕಾಪಡೆ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ ಈ ಮೀನುಗಾರರನ್ನು ಬಂಧಿಸಿದೆ. ಬಂಧಿತರನ್ನು ತಲೈಮನ್ನಾರ್‌ನಲ್ಲಿ ಬಂಧಿಸಿ, ಮುಂದಿನ ಕ್ರಮ ತೆಗೆದುಕೊಳ್ಳುವ ಮುನ್ನಾರ್‌ನ ಮೀನುಗಾರಿಕಾ ಇನ್‌ಸ್ಪೆಕ್ಟರ್‌ಗೆ ಹಸ್ತಾಂತರಿಸಲಾಗಿದೆ’ ಎಂದು ಅವರು ಮಾಹಿತಿ ನೀಡಿದರು.
ಪಾಕ್ ಜಲಸಂಧಿಯು ತಮಿಳುನಾಡು ಹಾಗೂ ಶ್ರೀಲಂಕಾ ನಡುವೆ ಸಮುದ್ರಮಾರ್ಗವನ್ನು ಪ್ರತ್ಯೇಕಿಸುತ್ತದೆ. ಹೆಚ್ಚು ಮೀನು ಸಿಗುವ ಕಾರಣ, ಎರಡೂ ರಾಷ್ಟ್ರಗಳ ಮೀನುಗಾರರ ನಡುವೆ ತಿಕ್ಕಾಟಕ್ಕೆ ಸಾಕ್ಷಿಯಾಗುತ್ತಿದೆ.