ಖಾರ್ಟೊಮ್: ಇಲ್ಲಿನ ಸೆರಾಮಿಕ್ ಕಾರ್ಖಾನೆಯಲ್ಲಿ ಎಲ್‌ಪಿಜಿ ಟ್ಯಾಂಕರ್ ಸ್ಫೋಟಗೊಂಡ ಪರಿಣಾಮ 18 ಭಾರತೀಯರೂ ಸೇರಿದಂತೆ 23 ಮಂದಿ ಮೃತಪಟ್ಟಿದ್ದಾರೆ ಎಂದು ಸುಡಾನ್ ಪೊಲೀಸರು ತಿಳಿಸಿದ್ದಾರೆ.

ಈ ದುರಂತದಲ್ಲಿ18 ಭಾರತೀಯರು ಮೃತಪಟ್ಟಿರುವುದನ್ನು ಸುಡಾನ್ ಭಾರತೀಯ ರಾಯಭಾರಿ ಕಚೇರಿ ಖಚಿತಪಡಿಸಿದೆ. ಈ ಕಾರ್ಖಾನೆಯಲ್ಲಿ 50ಕ್ಕೂ ಹೆಚ್ಚು ಭಾರತೀಯ ಕಾರ್ಮಿಕರು ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಇನ್ನು ಕೆಲ ಭಾರತೀಯ ಕಾರ್ಮಿಕರು ನಾಪತ್ತೆಯಾಗಿದ್ದಾರೆ. ಭಾರತೀಯ ಕಾರ್ಮಿಕರ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಗಳಿವೆ ಎಂದು ರಾಯಭಾರಿ ಕಚೇರಿ ಮೂಲಗಳು ತಿಳಿಸಿವೆ.

ಘಟನೆಯಲ್ಲಿ 130 ಜನರು ಗಾಯಗೊಂಡಿದ್ದಾರೆ. ಇವರಲ್ಲಿ 7 ಕಾರ್ಮಿಕರ ಸ್ಥಿತಿ ಚಿಂತಾಜನಕವಾಗಿದೆ ಎಂದು ಸುಡಾನ್‌ನ ಸರ್ಕಾರಿ ವಕ್ತಾರರು ತಿಳಿಸಿದ್ದಾರೆ. ಮೃತ ಭಾರತೀಯರನ್ನು ಗುರುತು ಹಚ್ಚುವ ಕಾರ್ಯ ನಡೆಯತ್ತಿದೆ ಎಂದು ರಾಯಭಾರಿ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ.

ದುರಂತ ನಡೆದ ಸ್ಥಳದಲ್ಲಿ ಅಗ್ನಿ ಸುರಕ್ಷತಾ ಕ್ರಮ ಇರದಿದ್ದ ಕಾರಣ ಹೆಚ್ಚಿನ ಅನಾಹುತ ಸಂಭವಿಸಿದೆ ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

ಸುಲಭವಾಗಿ ಬೆಂಕಿಗೆ ಹೊತ್ತಿಕೊಳ್ಳುವ ವಸ್ತುಗಳನ್ನು ಯಾವುದೇ ಸುರಕ್ಷತೆಯಿಲ್ಲದೆ ಸಂಗ್ರಹಿಸಿಟ್ಟಿದ್ದು ಈ ದುರಂತಕ್ಕೆ ಕಾರಣ ಎನ್ನಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.