ಮಂಗಳವಾರ, 23 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

POK: ಗಲ್ಲು ಶಿಕ್ಷೆಗೆ ಗುರಿಯಾಗಿದ್ದ 6 ಮಂದಿ ಸೇರಿ 18 ಕೈದಿಗಳು ಜೈಲಿನಿಂದ ಪರಾರಿ

Published 1 ಜುಲೈ 2024, 12:54 IST
Last Updated 1 ಜುಲೈ 2024, 12:54 IST
ಅಕ್ಷರ ಗಾತ್ರ

ಇಸ್ಲಾಮಾಬಾದ್: ಮರಣದಂಡನೆಗೆ ಗುರಿಯಾಗಿದ್ದ 6 ಮಂದಿ ಸೇರಿ ಕನಿಷ್ಠ 18 ಘಾತಕ ಅ‍ಪರಾಧಿಗಳು ಕಾವಲುಗಾರನ ಮೇಲೆ ಹಲ್ಲೆ ನಡೆಸಿ ಜೈಲಿನಿಂದ ಪರಾರಿಯಾದ ಘಟನೆ ಪಾಕ್ ಆಕ್ರಮಿತ ಕಾಶ್ಮೀರ(ಪಿಒಕೆ)ದಲ್ಲಿ ನಡೆದಿದೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.

ರಾವಲಕೋಟ್ ಜೈಲಿನಲ್ಲಿ ಅಪರಾಧಿಯೊಬ್ಬ ಜೈಲು ಕಾವಲುಗಾರನಿಗೆ ಬಂದೂಕು ತೋರಿಸಿ ಜೈಲಿನ ಕೀ ಪಡೆದುಕೊಂಡು ಪರಾರಿಯಾಗಿದ್ದಾನೆ. ಶುಕ್ರವಾರ ಈ ಘಟನೆ ನಡೆದಿದೆ.

18 ಕೈದಿಗಳ ಪೈಕಿ ಆರು ಮಂದಿ ಮರಣದಂಡನೆಗೆ ಗುರಿಯಾಗಿದ್ದರು. ಮೂವರು ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದರು. ತಪ್ಪಿಸಿಕೊಳ್ಳುತ್ತಿದ್ದ ವೇಳೆ ಪೊಲೀಸರು ಹಾರಿಸಿದ ಗುಂಡಿಗೆ ಓರ್ವ ಕೈದಿ ಹತನಾಗಿದ್ದಾನೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪರಾರಿಯಾದ ಕೈದಿಗಳಿಗಾಗಿ ಈ ಪ್ರದೇಶದಲ್ಲಿ ಪೊಲೀಸರು ಭಾರಿ ಶೋಧ ಕಾರ್ಯಾಚರಣೆ ಆರಂಭಿಸಿದ್ದಾರೆ.

ಘಟನೆಯ ಬಗ್ಗೆ ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ. ಜೈಲಿನ ಮುಖ್ಯಾಧಿಕಾರಿ ಮತ್ತು ಇತರ ಕೆಲವು ಅಧಿಕಾರಿಗಳನ್ನು ವಜಾಗೊಳಿಸಲಾಗಿದೆ. ಅಲ್ಲದೇ ಜೈಲಿನ ಡೆಪ್ಯುಟಿ ಸೂಪರಿಂಟೆಂಡೆಂಟ್ ಸೇರಿದಂತೆ 7 ಮಂದಿ ಅಧಿಕಾರಿಗಳನ್ನು ವಿಚಾರಣೆಗಾಗಿ ಬಂಧಿಸಲಾಗಿದೆ ಎಂದು ವರದಿಯಾಗಿದೆ.

ಭದ್ರತಾ ಲೋಪ ಹಿನ್ನೆಲೆಯಲ್ಲಿ ಪಾಕ್ ಆಕ್ರಮಿತ ಕಾಶ್ಮೀರ (ಪಿಒಕೆ)ಯಾದ್ಯಂತ ಎಲ್ಲಾ ಜೈಲುಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT