ಗುರುವಾರ, 22 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಂಗೊ ಅಪಘಾತ: 18 ಜನರ ಸಾವು

Published 22 ಜನವರಿ 2024, 14:28 IST
Last Updated 22 ಜನವರಿ 2024, 14:28 IST
ಅಕ್ಷರ ಗಾತ್ರ

ಕಿನ್ಶಾಸಾ (ಕಾಂಗೊ): ನೈರುತ್ಯ ಕಾಂಗೊದಲ್ಲಿ ಅತಿ ವೇಗವಾಗಿ ಚಲಿಸುತ್ತಿದ್ದ ಟ್ರಕ್‌ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿಬಿದ್ದಿದ್ದು, ಅದರಲ್ಲಿದ್ದ 18 ಜನ ಮೃತಪಟ್ಟಿದ್ದಾರೆ. ಅಲ್ಲದೆ ಹಲವರಿಗೆ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಸರಕುಗಳಿಂದ ತುಂಬಿದ್ದ ಮತ್ತು ಜನರನ್ನು ಕರೆದೊಯ್ಯುತ್ತಿದ್ದ ಟ್ರಕ್‌ ಕಾಂಗೊ ಸೆಂಟ್ರಲ್‌ ಜಿಲ್ಲೆಯ ಕಾಸಂಗುಲು ಪ್ರದೇಶದ ಹೆದ್ದಾರಿ ಬದಿಯಲ್ಲಿ ಕಂದಕಕ್ಕೆ ಉರುಳಿದೆ ಎಂದು ಪೊಲೀಸ್‌ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಈ ಅಪಘಾತದಲ್ಲಿ ಗಾಯಗೊಂಡವರನ್ನು ಕಾಸಂಗುಲು ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಗಾಯಗೊಂಡವರ ಪೈಕಿ ಆರು ಜನರ ಸ್ಥಿತಿ ಗಂಭೀರವಾಗಿದೆ. 15 ಜನರಿಗೆ ಸಣ್ಣಪಟ್ಟ ಗಾಯಗಳಾಗಿವೆ. ಮೃತಪಟ್ಟವರ ಶವಗಳನ್ನು ಇಲ್ಲಿನ ಶವಾಗಾರದಲ್ಲಿ ಇರಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT