ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಟೊರೊಂಟೊ ವಿಮಾನ ನಿಲ್ದಾಣದಲ್ಲಿ ಸ್ಫೋಟಕ ಸಾಧನ ಪ‍ತ್ತೆ: ಇಬ್ಬರ ಬಂಧನ

Last Updated 23 ಅಕ್ಟೋಬರ್ 2022, 13:48 IST
ಅಕ್ಷರ ಗಾತ್ರ

ಟೊರೆಂಟೊ : ಇಲ್ಲಿನ ವಿಮಾನ ನಿಲ್ದಾಣದಲ್ಲಿಶನಿವಾರ ಸ್ಫೋಟಕ ಸಾಧನಗಳು ಪತ್ತೆಯಾಗಿರುವುದಾಗಿ ಪೊಲೀಸರು ವರದಿ ಮಾಡಿರುವ ಹಿನ್ನೆಲೆಯಲ್ಲಿ,ವಿಮಾನಗಳನ್ನು ಸ್ಥಗಿತಗೊಳಿಸಲಾಗಿದ್ದು, ಪ್ರಯಾಣಿಕರನ್ನು ಸ್ಥಳಾಂತರಿಸಲು ಆದೇಶಿಸಲಾಗಿದೆ.

‘ಘಟನೆಗೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ. ರನ್‌ ವೇಯನ್ನು ಸಂಜೆ ಮುಚ್ಚಲಾಗಿದೆ. ಎರಡು ಏರ್‌ ಕೆನಡಾ ವಿಮಾನಗಳನ್ನು ಹ್ಯಾಮಿಲ್ಟನ್‌ಗೆ ಕಳುಹಿಸಲಾಗಿದೆ. ಟರ್ಮಿನಲ್‌ನಲ್ಲಿರುವ ಪ್ರಯಾಣಿಕರನ್ನು ಸ್ಥಳಾಂತರಿಸಲಾಗಿದೆ’ ಎಂದು ಬಿಲ್ಲಿ ಬಿಷಪ್‌ ವಿಮಾನ ನಿಲ್ದಾಣದ ಟ್ವೀಟ್‌ನಲ್ಲಿ ತಿಳಿಸಲಾಗಿದೆ. ಅಲ್ಲದೇ, ವಿಮಾನ ನಿಲ್ದಾಣ ಸುತ್ತಮುತ್ತಲ್ಲಿನ ರಸ್ತೆಗಳಲ್ಲಿ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT