ಶುಕ್ರವಾರ, 24 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬ್ರಿಟನ್‌: ಜಲಪಾತದಲ್ಲಿ ಮುಳುಗಿ ಇಬ್ಬರು ಭಾರತೀಯ ಮೂಲದ ಯುವಕರು ಸಾವು

Published 19 ಏಪ್ರಿಲ್ 2024, 15:18 IST
Last Updated 19 ಏಪ್ರಿಲ್ 2024, 15:18 IST
ಅಕ್ಷರ ಗಾತ್ರ

ಲಂಡನ್‌: ಬ್ರಿಟನ್‌ನ ಡಂಡಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ಭಾರತೀಯ ಮೂಲದ ಇಬ್ಬರು ವಿದ್ಯಾರ್ಥಿಗಳು ಸ್ಕಾಟ್ಲೆಂಡ್‌ನ ಜಲಪಾತದಲ್ಲಿ ಮುಳುಗಿ ಸಾವವನ್ನಪ್ಪಿದ್ದಾರೆ. ಮೃತ ವಿದ್ಯಾರ್ಥಿಗಳು ಆಂಧ್ರಪ್ರದೇಶದವರಾಗಿದ್ದು, 22 ಮತ್ತು 26 ವರ್ಷ ವಯಸ್ಸಿನವರಾಗಿದ್ದಾರೆ.  

ಸ್ನೇಹಿತರೆಲ್ಲ ಪರ್ಥ್‌ಶೈರ್‌ನ ಅಥೋಲ್‌ ಬಳಿಯ ಜಲಪಾತಕ್ಕೆ ವಿಹಾರಕ್ಕೆಂದು ತೆರಳಿದ್ದಾಗ ಬುಧವಾರ ಸಂಜೆ ಘಟನೆ ಸಂಭವಿಸಿದೆ. ಇಬ್ಬರು ಯುವಕರು ನೀರಿನಲ್ಲಿ ಮುಳುಗುತ್ತಿದ್ದಂತೆ ಜೊತೆಗಿದ್ದ ಸ್ನೇಹಿತರು ಸ್ಥಳೀಯ ರಕ್ಷಣಾ ಅಧಿಕಾರಿಗಳ ಬಳಿ ಸಹಾಯ ಕೋರಿದ್ದಾರೆ. ಕೂಡಲೇ ಅಗ್ನಿಶಾಮಕದಳ ಮತ್ತು ರಕ್ಷಣಾ ಸೇವೆ ತಂಡಗಳು ಸ್ಥಳದಲ್ಲಿ ಕಾರ್ಯಾಚರಣೆ ನಡೆಸಿವೆ. 

ಕಾರ್ಯಾಚರಣೆ ಬಳಿಕ ಯುವಕರ ಮೃತದೇಹಗಳನ್ನು ಹೊರತೆಗೆಯಲಾಗಿದೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT