ಸೋಮವಾರ, 17 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾಕಿಸ್ತಾನದಲ್ಲಿ ಬಸ್ ಅಪಘಾತ: 28 ಜನ ಸಾವು

ಈ ಬಸ್ ತರಬಾತ್‌ನಿಂದ ಕ್ವೆಟ್ಟಾಕ್ಕೆ ತೆರಳುತ್ತಿತ್ತು. ಟಯರ್ ಸ್ಪೋಟಗೊಂಡು ವಾಶುಕ್ ಬಳಿ ನದಿ ಕಣಿವೆಗೆ ಉರುಳಿ ಬಿದ್ದಿದೆ ಎಂದು ತಿಳಿದು ಬಂದಿದೆ.
Published 29 ಮೇ 2024, 7:42 IST
Last Updated 29 ಮೇ 2024, 7:42 IST
ಅಕ್ಷರ ಗಾತ್ರ

ಕರಾಚಿ: ಕಡಿದಾದ ಬೆಟ್ಟಗಳ ಮಾರ್ಗದಲ್ಲಿ ವೇಗವಾಗಿ ಸಂಚರಿಸುತ್ತಿದ್ದ ಪ್ರಯಾಣಿಕರ ಬಸ್ಸೊಂದು ನದಿ ಕಣಿವೆಗೆ ಉರುಳಿ ಬಿದ್ದು ಮಹಿಳೆಯರು, ಮಕ್ಕಳೂ ಸೇರಿ 28 ಜನ ಮೃತ‍ಪಟ್ಟಿರುವ ಘಟನೆ ಬುಧವಾರ ಪಾಕಿಸ್ತಾನದ ಬಲೂಚಿಸ್ತಾನ ಪ್ರಾಂತ್ಯದಲ್ಲಿ ಸಂಭವಿಸಿದೆ.

ಈ ಬಸ್ ತರಬಾತ್‌ನಿಂದ ಕ್ವೆಟ್ಟಾಕ್ಕೆ ತೆರಳುತ್ತಿತ್ತು. ಟಯರ್ ಸ್ಪೋಟಗೊಂಡು ವಾಶುಕ್ ಬಳಿ ನದಿ ಕಣಿವೆಗೆ ಉರುಳಿ ಬಿದ್ದಿದೆ ಎಂದು ತಿಳಿದು ಬಂದಿದೆ.

ಘಟನೆಯಲ್ಲಿ 22ಕ್ಕೂ ಹೆಚ್ಚು ಜನ ಗಾಯಗೊಂಡಿದ್ದು ಅವರನ್ನು ಬಾಸಿಮಾದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನಾ ಸ್ಥಳಕ್ಕೆ ಪರಿಹಾರ ಕಾರ್ಯಾಚರಣೆ ತಂಡ ತೆರಳಿದ್ದು ಮೃತದೇಹಗಳನ್ನು ಹೊರತೆಗೆಯುವ ಕಾರ್ಯ ನಡೆಯುತ್ತಿದೆ ಎಂದು ವರದಿಗಳು ತಿಳಿಸಿ

ಸಂಚಾರ ನಿಯಮಗಳನ್ನು ಸರಿಯಾಗಿ ಪಾಲಿಸದಿರುವುದಕ್ಕೆ ಪಾಕಿಸ್ತಾನದಲ್ಲಿ ರಸ್ತೆ ಅಪಘಾತಗಳು ಹೆಚ್ಚು ಸಂಭವಿಸುತ್ತಿವೆ ಎಂದು ಪಿಟಿಐ ವರದಿ ಮಾಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT