ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾಕಿಸ್ತಾನ ಚುನಾವಣೆ: ಮರು ಮತ ಎಣಿಕೆ ವೇಳೆ ಗುಂಡಿನ ದಾಳಿ, ಇಬ್ಬರ ಸಾವು

Published 15 ಫೆಬ್ರುವರಿ 2024, 11:20 IST
Last Updated 15 ಫೆಬ್ರುವರಿ 2024, 11:20 IST
ಅಕ್ಷರ ಗಾತ್ರ

ಕರಾಚಿ: ಪಾಕಿಸ್ತಾನದ ಬಲೂಚಿಸ್ತಾನ ಪ್ರಾಂತ್ಯದ ಕ್ಷೇತ್ರವೊಂದರಲ್ಲಿ ಮರು ಮತ ಎಣಿಕೆ ಸಂದರ್ಭದಲ್ಲಿ ಎರಡು ರಾಜಕೀಯ ಪಕ್ಷಗಳ ಬೆಂಬಲಿಗರ ನಡುವೆ ಶಸ್ತ್ರಸಜ್ಜಿತ ದಾಳಿ ನಡೆದಿದ್ದು, ದಾಳಿಯಲ್ಲಿ ಇಬ್ಬರು ಮೃಪಟ್ಟಿದ್ದಾರೆ ಎಂದು ಪೊಲೀಸರು ಹೇಳಿದರು.

‘ಬಲೂಚಿಸ್ತಾನ್ ಅವಾಮಿ ಪಾರ್ಟಿ (ಬಿಎಪಿ) ಮತ್ತು ಪಾಕಿಸ್ತಾನ್ ಪೀಪಲ್ಸ್ ಪಾರ್ಟಿ (ಪಿಪಿಪಿ) ಬೆಂಬಲಿಗರ ನಡುವೆ ಕರಾಚಿ ಗಡಿ ಭಾಗದ ಕೈಗಾರಿಕಾ ಪ್ರದೇಶದಲ್ಲಿರುವ ಚುನಾವಣಾಧಿಕಾರಿ ಕಚೇರಿ ಹೊರಭಾಗದಲ್ಲಿ ಉಭಯ ಪಕ್ಷಗಳ ಬೆಂಬಲಿಗರ ನಡುವೆ ಮಾರಾಮಾರಿ ನಡೆದಿದೆ. ಘರ್ಷಣೆಯಲ್ಲಿ ಸುಮಾರು 14 ಮಂದಿ ಗಾಯಗೊಂಡಿದ್ದಾರೆ’ ಎಂದು ಅವರು ತಿಳಿಸಿದರು.

ಫೆಬ್ರುವರಿ 8ರಂದು ನಡೆದ ಚುನಾವಣೆಯಲ್ಲಿ ಬಿಎಪಿಯ ಮೊಹಮ್ಮದ್‌ ಸಲೇಹ್‌ ಭೂತಾನಿ ಅವರನ್ನು ಗೆದ್ದ ಅಭ್ಯರ್ಥಿ ಎಂದು ಘೋಷಿಸಲಾಗಿತ್ತು. ಮತ ತಿರುಚಿದ ಆರೋಪ ಮಾಡಿದ ಪಿಪಿಪಿಯ ಅಲಿ ಹಸನ್ ಝೆಹ್ರಿ, ಫಲಿತಾಂಶ ರದ್ದುಗೊಳಿಸಿ ಮರು ಮತ ಎಣಿಕೆ ಮಾಡುವಂತೆ ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದರು. ಇದರಂತೆ ಬುಧವಾರ ಮರು ಮತ ಎಣಿಕೆ ನಡೆದಿದೆ.

‘39 ಮತಗಟ್ಟೆಗಳಲ್ಲಿ ಮತ ಎಣಿಕೆ ನಡೆಯುತ್ತಿದ್ದ ವೇಳೆ ಘರ್ಷಣೆ ನಡೆದಿದೆ. ಉಭಯ ಅಭ್ಯರ್ಥಿಗಳ ಬೆಂಬಲಿಗರ ನಡುವೆ ವಾಗ್ವಾದ ನಡೆದಿದ್ದು, ಇದು ಹಿಂಸಾಚಾರಕ್ಕೆ ಇಳಿಯಿತು. ಗುಂಡಿನ ದಾಳಿಗೆ ಇಬ್ಬರು ಮೃತಪಟ್ಟಿದ್ದಾರೆ’ ಎಂದರು.

ಸಾರ್ವತ್ರಿಕ ಚುನಾವಣೆ ನಡದ ಬಳಿಕೆ ಬಲೂಚಿಸ್ತಾನ ಪ್ರಾಂತ್ಯದಲ್ಲಿ ಅಶಾಂತಿ ಉಂಟಾಗಿದ್ದು, ಮತ ತಿರಚಿಲಾಗಿದೆ ಎಂದು ಆರೋಪಿಸಿದ ಕೆಲ ರಾಜಕೀಯ ಪಕ್ಷಗಳು ಹೆದ್ದಾರಿ ಬಂದ್ ಮಾಡಿ, ಸಂಪೂರ್ಣ ಮುಷ್ಕರಕ್ಕೆ ಕರೆ ನೀಡಿದ್ದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT