ಸೋಮವಾರ, 15 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಢಾಕಾ: ಅಗ್ನಿ ಅವಘಡ– ಮೂವರ ಬಂಧನ

Published 2 ಮಾರ್ಚ್ 2024, 13:14 IST
Last Updated 2 ಮಾರ್ಚ್ 2024, 13:14 IST
ಅಕ್ಷರ ಗಾತ್ರ

ಢಾಕಾ: ಇಲ್ಲಿನ ಶಾಪಿಂಗ್ ಮಾಲ್‌ನಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಕನಿಷ್ಠ 46 ಮಂದಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ರೆಸ್ಟೋರೆಂಟ್‌ನ ಇಬ್ಬರು ಮಾಲೀಕರು ಸೇರಿದಂತೆ ಮೂವರನ್ನು ಬಾಂಗ್ಲಾದೇಶ ಪೊಲೀಸರು ಬಂಧಿಸಿದ್ದಾರೆ.

‘ಕಟ್ಟಡದ ನೆಲಮಹಡಿಯಲ್ಲಿ ಮೊದಲಿಗೆ ಬೆಂಕಿ ಕಾಣಿಸಿಕೊಂಡಿತ್ತು. ನಿರ್ಲಕ್ಷ್ಯ ಆರೋಪದಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು’ ಎಂದು ಪೊಲೀಸ್ ಹೆಚ್ಚುವರಿ ಆಯುಕ್ತ ಮಹೀದ್‌ ಉದ್ದೀನ್‌ ತಿಳಿಸಿದ್ದಾರೆ.

ಗುರುವಾರ ರಾತ್ರಿ 9.50ರ ಸುಮಾರಿಗೆ ‘ಕಚ್ಚಿ ಭಾಯಿ’ ರೆಸ್ಟೋರೆಂಟ್‌ನ ಮೊದಲ ಮಹಡಿಯಲ್ಲಿ ಅಗ್ನಿ ಅವಘಡ ಸಂಭವಿಸಿತ್ತು. ನಂತರ ಅದು ಉಳಿದ ಮಹಡಿಗಳಿಗೆ ವ್ಯಾಪಿಸಿತ್ತು. ಘಟನೆಯಲ್ಲಿ ಕನಿಷ್ಠ 46 ಮಂದಿ ಮೃತಪಟ್ಟು, 20 ಮಂದಿ ಗಾಯಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT