ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾಕಿಸ್ತಾನ: ಮೋಟರ್‌ ಬೈಕ್‌ನಲ್ಲಿ ಅಡಗಿಸಿಟ್ಟಿದ್ದ ಸ್ಪೋಟಕ ಸಿಡಿದು ಮೂವರಿಗೆ ಗಾಯ

Published 24 ಫೆಬ್ರುವರಿ 2024, 3:15 IST
Last Updated 24 ಫೆಬ್ರುವರಿ 2024, 3:15 IST
ಅಕ್ಷರ ಗಾತ್ರ

ಪೇಶಾವರ: ‍‍ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಮೋಟರ್‌ ಬೈಕೊಂದರಲ್ಲಿ ಅಡಗಿಸಿಟ್ಟಿದ್ದ ಸ್ಫೋಟಕ ಸಿಡಿದು ಮೂವರು ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಇಸ್ಮಾಯಿಲ್ ಖಾನ್ ಜಿಲ್ಲೆಯ ದರಜಿಂದ ಪ್ರದೇಶದಲ್ಲಿ ಶುಕ್ರವಾರ ಈ ಘಟನೆ ನಡೆದಿದೆ.

ಸ್ಫೋಟಕ ಇರಿಸಿದ್ದ ಮೋಟರ್‌ ಬೈಕನ್ನು ಹೋಟೆಲ್ ಒಂದರ ಮುಂದೆ ನಿಲ್ಲಿಸಲಾಗಿತ್ತು. ಸ್ಫೋಟದಿಂದಾಗಿ ಬೈಕ್‌ ಸಮೀಪ ಇದ್ದ ಮೂವರು ಗಾಯಗೊಂಡಿದ್ದಾರೆ. ಅವರ ಪರಿಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸ್ಥಳಕ್ಕೆ ಪೊಲೀಸರ ಪಡೆಯೇ ದೌಡಾಯಿಸಿದ್ದು, ಇಡೀ ಪ್ರದೇಶವನ್ನು ಸುತ್ತುವರಿದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT