ಮಂಗಳವಾರ, 23 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಸಿನ್ಸಿನಾಟಿ ವಿವಿ ಆವರಣದ ಹತ್ತಿರ ಗುಂಡಿನ ದಾಳಿ: ಮೂವರು ಸಾವು

Published 2 ಜುಲೈ 2024, 16:09 IST
Last Updated 2 ಜುಲೈ 2024, 16:09 IST
ಅಕ್ಷರ ಗಾತ್ರ

ಸಿನ್ಸಿನಾಟಿ: ಅಮೆರಿಕದ ಸಿನ್ಸಿನಾಟಿ ವಿಶ್ವವಿದ್ಯಾಲಯ ಆವರಣದ ಸಮೀಪ ಸೋಮವಾರ ಮಧ್ಯರಾತ್ರಿ ನಡೆದ ಗುಂಡಿನ ದಾಳಿಯಲ್ಲಿ ಮೂವರು ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಈ ಪ್ರಕರಣದಲ್ಲಿ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. 

ಸಿನ್ಸಿನಾಟಿ ವಿವಿಯ ಸುಮಾರು ಒಂದು ಕಿ.ಮೀ ದೂರದ ರಸ್ತೆಯಲ್ಲಿ ಹಲವು ಬಾರಿ ಗುಂಡಿನ ಸದ್ದು ಕೇಳಿದ್ದು, ಐವರು ವ್ಯಕ್ತಿಗಳ ಮೇಲೆ ದಾಳಿ ನಡೆದಿದೆ. ಈ ಪೈಕಿ ಒಬ್ಬ ಗಾಯಾಳು ತಾನೇ ಆಸ್ಪತ್ರೆಗೆ ಹೋಗಿ ದಾಖಲಾಗಿದ್ದಾನೆ. ಮತ್ತೊಬ್ಬ ಗಾಯಾಳುವನ್ನು ಪೊಲೀಸರೇ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. 

ಬೆಳಗಿನ ಜಾವ 3 ಗಂಟೆಗೂ ಮೊದಲು ವಿ.ವಿ ಆವರಣದ ಸಮೀಪ ಗುಂಡಿನ ದಾಳಿ ನಡೆದಿದೆ. ಪೊಲೀಸರು ತ್ವರಿತವಾಗಿ ಬಂದು ಕಾರ್ಯಾಚರಣೆ ಕೈಗೊಂಡರು ಎಂದು ವಿಶ್ವವಿದ್ಯಾಲಯದ ಸಾರ್ವಜನಿಕ ಸುರಕ್ಷತಾ ಇಲಾಖೆಯು ‘ಎಕ್ಸ್’ ವೇದಿಕೆಯಲ್ಲಿ ತಿಳಿಸಿದೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT