ಕರಾಚಿ: ಪಾಕಿಸ್ತಾನದ ಬಲೂಚಿಸ್ತಾನ ಪ್ರಾಂತ್ಯದ ಮಾರುಕಟ್ಟೆ ಸಮೀಪ ಬಾಂಬ್ ಸ್ಫೋಟಗೊಂಡು, 4 ಮಂದಿ ಮೃತಪಟ್ಟಿದ್ದು, 20 ಮಂದಿ ಗಾಯಗೊಂಡಿದ್ದಾರೆ.

‘ಇಲ್ಲಿನ ಕಿಲಾ ಅಬ್ದುಲ್ಲಾ ಜಿಲ್ಲೆಯ ಜಬ್ಬಾರ್ ಮಾರುಕಟ್ಟೆ ಸಮೀಪ ಸ್ಫೋಟ ಸಂಭವಿಸಿದ್ದು, ಹಲವು ಅಂಗಡಿಗಳು ಕುಸಿದುಬಿದ್ದವು. ಸುತ್ತಲೂ ತೀವ್ರ ಆತಂಕ ಸೃಷ್ಟಿಯಾಗಿತ್ತು’ ಎಂದು ‘ದಿ ಎಕ್ಸ್ಪ್ರೆಸ್ ಟ್ರಿಬ್ಯೂನ್’ ಪತ್ರಿಕೆ ವರದಿ ಮಾಡಿದೆ.

‘ಸ್ಫೋಟದಿಂದ 4 ಮಂದಿ ಮೃತಪಟ್ಟಿದ್ದು, 20 ಮಂದಿ ಗಾಯಗೊಂಡಿದ್ದಾರೆ’ ಎಂದು ಕಿಲಾ ಅಬ್ದುಲ್ಲಾ ಜಿಲ್ಲೆಯ ಜಿಲ್ಲಾಧಿಕಾರಿ ರಿಯಾಜ್ ಖಾನ್ ತಿಳಿಸಿದ್ದಾರೆ.

ಫ್ರಾಂಟಿಯರ್ ಕೋರ್ ಕೋಟೆಯ ಗೋಡೆಗೆ ಹೊಂದಿಕೊಂಡಂತೆ ಮಾರುಕಟ್ಟೆಯಿದೆ. ಸ್ಫೋಟದ ಬಳಿಕ ಅಪರಿಚಿತ ವ್ಯಕ್ತಿಗಳು ಹಾಗೂ ಕೋಟೆ ಕಾವಲುಗಾರರ ನಡುವೆ ಗುಂಡಿನ ಚಕಮಕಿ ನಡೆದಿದೆ.

ಅಧಿಕಾರಿಗಳು ಸ್ಥಳವನ್ನು ಸಂಪೂರ್ಣವಾಗಿ ತಮ್ಮ ವಶಕ್ಕೆ ಪಡೆದಿದ್ದು, ಶೋಧ ಕಾರ್ಯ ಆರಂಭಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.