ಲಾಹೋರ್: ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಸರ್ ಗಂಗಾರಾಮ್ ಆಸ್ಪತ್ರೆಯಲ್ಲಿ ಐದು ವರ್ಷದ ಬಾಲಕಿಯ ಮೇಲೆ ಸ್ವಚ್ಛತಾ ಕಾರ್ಮಿಕನೊಬ್ಬ ಸೋಮವಾರ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ. ಪೊಲೀಸರು ಸೋಮವಾರ ಈ ವಿಷಯ ತಿಳಿಸಿದರು.
ಆಸ್ಪತ್ರೆಯ ಮೂರನೇ ಮಹಡಿಯಲ್ಲಿ ಸೋಮವಾರ ಅತ್ಯಾಚಾರ ನಡೆದಿದೆ ಎಂದು ಆರೋಪಿಸಲಾಗಿದ್ದು, ವಿದ್ಯಾರ್ಥಿಗಳು ಹಾಗೂ ಮಹಿಳಾ ವೈದ್ಯರು ಘಟನೆಯನ್ನು ಖಂಡಿಸಿ ಪ್ರತಿಭಟನೆ ನಡೆಸಿದರು.
ಸ್ವಚ್ಛತಾ ಕಾರ್ಮಿಕನು 20 ವರ್ಷ ದಾಟಿದ ವಯಸ್ಸಿನವನಾಗಿದ್ದಾನೆ. ಅತ್ಯಾಚಾರ ನಡೆದ ಸಂದರ್ಭದಲ್ಲಿ ಬಾಲಕಿಯು ಚೀರಿದಳು. ಆ ಸದ್ದನ್ನು ಕೇಳಿ ರೋಗಿಗಳು ಹಾಗೂ ಅವರ ಸಂಬಂಧಿಕರು ಅವನನ್ನು ಹಿಡಿದು, ಒಪ್ಪಿಸಿದರು. ಬಾಲಕಿಯನ್ನು ತುರ್ತು ನಿಗಾ ಘಟಕದಲ್ಲಿ ಇರಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದರು.