ಲಾಹೋರ್: ಪಂಜಾಬ್ ಪ್ರಾಂತ್ಯದಲ್ಲಿನ ಹಿಂದೂ ದೇವಸ್ಥಾನದ ಮೇಲೆ ನಡೆದ ದಾಳಿಗೆ ಸಂಬಂಧಿಸಿ ಪೊಲೀಸ್ ಇಲಾಖೆ 50ಕ್ಕೂ ಹೆಚ್ಚು ಜನರನ್ನು ಶನಿವಾರ ಬಂಧಿಸಿದೆ.

ಘಟನೆಗೆ ಸಂಬಂಧಿಸಿ 150ಕ್ಕೂ ಹೆಚ್ಚು ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪಂಜಾಬ್ ಪ್ರಾಂತ್ಯದ ಮುಖ್ಯಮಂತ್ರಿ ಉಸ್ಮಾನ್ ಬುಜ್ದಾರ್ ಟ್ವೀಟ್ ಮಾಡಿದ್ದಾರೆ.

ಈ ಘಟನೆ ರಹೀಮ್ ಯಾರ್ ಖಾನ್ ಜಿಲ್ಲೆಯ ಭೋಂಗ್ ಪಟ್ಟಣದಲ್ಲಿ ಬುಧವಾರ ನಡೆದಿತ್ತು. ಸ್ಥಳೀಯ ಧಾರ್ಮಿಕ ಶಾಲೆಯೊಂದರಲ್ಲಿ 8 ವರ್ಷದ ಹಿಂದೂ ಬಾಲಕನೊಬ್ಬ ಮೂತ್ರ ವಿಸರ್ಜನೆ ಮಾಡಿದ್ದ ಎಂದು ಆರೋಪಿಸಲಾಗಿತ್ತು. ಬಾಲಕನನ್ನು ಬಂಧಿಸಿದ್ದ ಅಧಿಕಾರಿಗಳು ನಂತರ ಬಿಡುಗಡೆ ಮಾಡಿದ್ದರು.

ಬಾಲಕನನ್ನು ಬಿಡುಗಡೆ ಮಾಡಿದ್ದನ್ನು ವಿರೋಧಿಸಿದ್ದ ಗುಂಪೊಂದು, ಸ್ಥಳೀಯ ದೇವಸ್ಥಾನದ ಮೇಲೆ ದಾಳಿ ಮಾಡಿತ್ತು.

ಸುಪ್ರೀಂಕೋರ್ಟ್‌ನ ಮುಖ್ಯನ್ಯಾಯಮೂರ್ತಿ ಗುಲ್ಜಾರ್ ಅಹ್ಮದ್ ಅವರು ಈ ಘಟನೆಯನ್ನು ಖಂಡಿಸಿದ್ದರಲ್ಲದೇ, ಪೊಲೀಸರಿಗೆ ಛೀಮಾರಿ ಹಾಕಿದ್ದರು.

ಮೋದಿ ನೇತೃತ್ವದಲ್ಲಿ ಭಾರತ ಕೋವಿಡ್ ಗೆದ್ದಿದೆ: ಅಮಿತ್ ಶಾ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.