ಇಸ್ಲಾಮಾಬಾದ್: ಅತ್ಯಾಚಾರಕ್ಕೆ ಒಳಗಾದ ದಕ್ಷಿಣ ಸಿಂಧ್ ಪ್ರಾಂತ್ಯದ ಹಿಂದೂ ಮಹಿಳೆಗೆ ಪೊಲೀಸ್ ರಕ್ಷಣೆ ನೀಡುವಂತೆ ಸಿಂಧ್ ಹೈಕೋರ್ಟ್ ಆದೇಶಿಸಿದೆ. ಕಳೆದ ತಿಂಗಳು ಪ್ರತಿಷ್ಠಿತ ಕುಟುಂಬದ ವ್ಯಕ್ತಿಯೊಬ್ಬನಿಂದ ಉಮೆರ್ಕೋಟ್ ಜಿಲ್ಲೆಯ ಕುನ್ರಿ ಪ್ರದೇಶದಲ್ಲಿ ಮಹಿಳೆ ಅತ್ಯಾಚಾರಕ್ಕೆ ಒಳಗಾಗಿದ್ದರು.

ಸಂತ್ರಸ್ತ ಮಹಿಳೆ ಮತ್ತು ಆಕೆಯ ಕುಟುಂಬದವರಿಗೆ ರಕ್ಷಣೆ ನೀಡಬೇಕು ಮತ್ತು ಆರೋಪಿಯ ವಿರುದ್ಧ ಕ್ರಮ ಜರುಗಿಸಬೇಕು ಎಂದು ಉಮೆರ್ಕೋಟ್ ಎಸ್‌ಪಿ ಮತ್ತು ಡಿಐಜಿಗೆ ನಿರ್ದೇಶನ ನೀಡಿದ್ದಾರೆ.

ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ ರಚಿಸಲಾಗಿದೆ. ಪೊಲೀಸ್ ಉಪ ವಿಭಾಗಾಧಿಕಾರಿ ಕುನ್ರಿ ಮತ್ತು ನವಿಸರ್ ಠಾಣಾ ಅಧಿಕಾರಿ ತಂಡದಲ್ಲಿದ್ದಾರೆ ಎಂಬ ಮಾಹಿತಿಯನ್ನು ಪೊಲೀಸರು ಕೋರ್ಟ್‌ಗೆ ಸಲ್ಲಿಸಿದ್ದಾರೆ.

ನಬಿಸರ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಆರೋಪಿಯನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಕುನ್ರಿ ತಾಲ್ಲೂಕು ಆಸ್ಪತ್ರೆಯಲ್ಲಿ ಸಂತ್ರಸ್ತೆಯ ವೈದ್ಯಕೀಯ ತಪಾಸಣೆ ನಡೆಸಲಾಗಿದೆ. ಡಿಎನ್‌ಎ ಪರೀಕ್ಷೆಗಾಗಿ ಮಾದರಿಗಳನ್ನು ಸಂಗ್ರಹಿಸಲಾಗಿದೆ. ಅತ್ಯಾಚಾರ ನಡೆದಿರುವುದು ಸಾಬೀತಾಗಿದೆ. ತನಿಖೆ ನಡೆಸಲಾಗುತ್ತಿದೆ ಎಂದು ವರದಿಯಲ್ಲಿ ಹೇಳಲಾಗಿದೆ.

ದಕ್ಷಿಣ ಸಿಂಧ್ ಪ್ರಾಂತ್ಯದಲ್ಲಿ ಪ್ರತಿ ತಿಂಗಳು 20ರಿಂದ 25 ಹಿಂದೂ ಯುವತಿಯರನ್ನು ಬಲವಂತವಾಗಿ ಇಸ್ಲಾಂ ಧರ್ಮಕ್ಕೆ ಮತಾಂತರ ಮಾಡಲಾಗುತ್ತಿದೆ ಎಂದು ಪಾಕಿಸ್ತಾನದ ಮಾನವ ಹಕ್ಕುಗಳ ಆಯೋಗ ಹೇಳಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.