ಕೋಲಂಬೊ: ಭಾರಿ ಮಳೆಯ ಪರಿಣಾಮ ಶ್ರೀಲಂಕಾದಲ್ಲಿ ಆರು ಮಂದಿ ಶುಕ್ರವಾರ ಮೃತಪಟ್ಟಿದ್ದಾರೆ.

ಮಳೆಯಿಂದ 1346 ಮನೆಗಳಿಗೆ ಹಾನಿಯಾಗಿದ್ದು, ದೇಶಾದ್ಯಂತ ರೈಲು ಸಂಚಾರಕ್ಕೆ ಅಡಚಣೆಯುಂಟಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

‘ಭಾರಿ ಮಳೆ ಮತ್ತು ಗಾಳಿಯಿಂದ ಮರಗಳು ಉರುಳಿಬಿದ್ದು, ನಾಲ್ಕು ಜಿಲ್ಲೆಗಳಲ್ಲಿ ಆರು ಮಂದಿ ಸಾವಿಗೀಡಾಗಿದ್ದಾರೆ. 34 ಸಾವಿರ ಮಂದಿ ನಿರಾಶ್ರಿತರಾಗಿದ್ದಾರೆ‘ ಎಂದು ವಿಪತ್ತು ನಿರ್ವಹಣಾ ಕೇಂದ್ರ ತಿಳಿಸಿದೆ. ಅಲ್ಲದೆ ತೀವ್ರ ಈಶಾನ್ಯ ಮಾನ್ಸೂನ್ ಮಳೆಯ ಎಚ್ಚರಿಕೆ ನೀಡಿದೆ.

ರೈಲು ಹಳಿಗಳಲ್ಲಿ ಮರಗಳು ಬಿದ್ದಿರುವುದರಿಂದ ಶ್ರೀಲಂಕಾ ರೈಲ್ವೆ ಇಲಾಖೆ ಹಲವು ರೈಲುಗಳ ಸಂಚಾರವನ್ನು ರದ್ದುಗೊಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.