ಶನಿವಾರ, 20 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಸೈಬರ್ ಅಪರಾಧ ಕೃತ್ಯದಲ್ಲಿ ಭಾಗಿ ಆರೋಪ: ಶ್ರೀಲಂಕಾದಲ್ಲಿ 60 ಭಾರತೀಯರ ಬಂಧನ

Published 28 ಜೂನ್ 2024, 10:10 IST
Last Updated 28 ಜೂನ್ 2024, 10:10 IST
ಅಕ್ಷರ ಗಾತ್ರ

ಕೊಲೊಂಬೊ: ಸೈಬರ್‌ ಅಪರಾಧ ಕೃತ್ಯಗಳಲ್ಲಿ ಭಾಗಿಯಾದ ಆರೋಪದ ಮೇಲೆ ಕನಿಷ್ಠ 60 ಭಾರತೀಯರನ್ನೊಳಗೊಂಡ ಗುಂಪನ್ನು ಶ್ರೀಲಂಕಾದ ಅಪರಾಧ ತನಿಖಾ (ಸಿಐಡಿ) ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.

ಕೊಲೊಂಬೊ ಉಪನಗರಗಳಾದ ಮಡಿವೇಲಾ, ಬತ್ತರಮುಲ್ಲಾ ಹಾಗೂ ಪಶ್ಚಿಮ ಕರಾವಳಿ ಪಟ್ಟಣ ನೆಗೊಂಬೊದಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ. ಈ ಸ್ಥಳಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಿದ ಸಿಐಡಿ, 135 ಮೊಬೈಲ್‌ಗಳು ಹಾಗೂ 57 ಲ್ಯಾಪ್‌ಟಾಪ್‌ಗಳನ್ನು ವಶಕ್ಕೆ ಪಡೆದಿದೆ ಎಂದು ಪೊಲೀಸ್‌ ಇಲಾಖೆ ವಕ್ತಾರ ಎಸ್‌ಎಸ್‌ಪಿ ನಿಹಾಲ್‌ ತಲ್ದುವಾ ತಿಳಿಸಿದ್ದಾರೆ.

ಸಾಮಾಜಿಕ ಮಾಧ್ಯಮದಲ್ಲಿ ಸಂವಾದ ನಡೆಸಿ ಹಣ ಸಂಪಾದಿಸಬಹುದು ಎಂದು ವಾಟ್ಸ್‌ಆ್ಯಪ್‌ ಮೂಲಕ ಒಡ್ಡಿದ್ದ ಆಮಿಷಕ್ಕೆ ತುತ್ತಾಗಿ ವಂಚನೆಗೆ ಒಳಗಾದ ಸಂತ್ರಸ್ತರೊಬ್ಬರು ನೀಡಿದ್ದ ದೂರಿನ ಮೇರೆಗೆ ತನಿಖೆ ಕೈಗೊಳ್ಳಲಾಗಿತ್ತು. ಅದರ ಭಾಗವಾಗಿಯೇ ಈ ದಾಳಿ ನಡೆಸಲಾಗಿದೆ ಎಂದು ಹೇಳಿದ್ದಾರೆ.

ಬಂಧಿತರು ದುಬೈ ಹಾಗೂ ಅಫ್ಗಾನಿಸ್ತಾನ ಸಂಪರ್ಕ ಹೊಂದಿದ್ದಾರೆ. ಇವರೆಲ್ಲ ಹಣಕಾಸು ವಂಚನೆ, ಬೆಟ್ಟಿಂಗ್‌ ಹಾಗೂ ಗ್ಯಾಂಬ್ಲಿಂಗ್‌ ಸೇರಿದಂತೆ ಇನ್ನಿತರ ಅಕ್ರಮ ಚಟುವಟಿಕೆಗಳಲ್ಲಿ ಭಾಗಿಯಾಗಿರುವ ಶಂಕೆ ಇದೆ. ಸ್ಥಳೀಯರು ಹಾಗೂ ವಿದೇಶಿ ಪ್ರಜೆಗಳು ಸಹ ಇವರ ಮೋಸದ ಜಾಲಕ್ಕೆ ಬಿದ್ದಿರುವ ಸಾಧ್ಯತೆ ಇದೆ. ತನಿಖೆ ಪ್ರಗತಿಯಲ್ಲಿದೆ ಎಂದೂ ನಿಹಾಲ್‌ ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT