ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಚೀನಾದಲ್ಲಿ 6.2 ತೀವ್ರತೆಯ ಭೂಕಂಪ: 111 ಮಂದಿ ಸಾವು

Published 19 ಡಿಸೆಂಬರ್ 2023, 2:44 IST
Last Updated 19 ಡಿಸೆಂಬರ್ 2023, 2:44 IST
ಅಕ್ಷರ ಗಾತ್ರ

ಬೀಜಿಂಗ್‌: ವಾಯವ್ಯ ಚೀನಾದ ಗನ್ಸು ಮತ್ತು ಕಿಂಗ್‌ಜೈ ‍ಪ್ರಾಂತ್ಯದಲ್ಲಿ ಸೋಮವಾರ ಮಧ್ಯರಾತ್ರಿ ಪ್ರಬಲ ಭೂಕಂಪ ಸಂಭವಿಸಿದ್ದು, 111 ಮಂದಿ ಮೃತಪಟ್ಟಿದ್ದಾರೆ. ರಿಕ್ಟರ್‌ ಮಾಪಕದಲ್ಲಿ ಭೂಕಂಪದ ತೀವ್ರತೆ 6.2 ದಾಖಲಾಗಿದೆ.

ಮಧ್ಯರಾತ್ರಿ 11.59ರ ಸುಮಾರಿಗೆ ಈ ಅವಘಡ ಸಂಭವಿಸಿದೆ. ಗನ್ಸು ಪ್ರಾಂತ್ಯದ ಲಿಯುಗೌ ಟೌನ್‌ಶಿಪ್‌ ಬಳಿ ಭೂಕಂಪದ ಕೇಂದ್ರ ಬಿಂದು ದಾಖಲಾಗಿದೆ ಎಂದು ಚೀನಾದ ಭೂಕಂಪನ ನೆಟ್‌ವರ್ಕ್‌ ಸೆಂಟರ್‌ ತಿಳಿಸಿದೆ.

ಭೂಕಂಪದಿಂದಾಗಿ ಹಲವು ಗ್ರಾಮಗಳಲ್ಲಿ ವಿದ್ಯುತ್‌ ಸಂಪರ್ಕ ಕಡಿತಗೊಂಡು ನೀರಿನ ಸಮಸ್ಯೆ ಉಂಟಾಗಿದೆ. ಮನೆಗಳು, ರಸ್ತೆಗಳು ಸೇರಿದಂತೆ ಇತರ ಮೂಲಸೌಕರ್ಯಗಳು ಹಾನಿಗೊಳಗಾಗಿರುವುದರ ಕುರಿತು ಚೀನಾದ ಕ್ಸಿನ್ಹುವಾ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಸುಮಾರು 88 ಅಗ್ನಿಶಾಮಕ ವಾಹನಗಳೊಂದಿಗೆ 580 ಸಿಬ್ಬಂದಿ, ಹುಡುಕಾಟ ಮತ್ತು ರಕ್ಷಣಾ ಕಾರ್ಯಾಚರಣೆಯಲ್ಲಿ ಪಳಗಿರುವ 12 ಶ್ವಾನಗಳು ಹಾಗೂ 10,000ಕ್ಕೂ ಹೆಚ್ಚು ಉಪಕರಣಗಳನ್ನು ವಿಪತ್ತು ಪ್ರದೇಶಕ್ಕೆ ರವಾನಿಸಿರುವುದಾಗಿ ಪ್ರಾಂತೀಯ ಅಗ್ನಿಶಾಮಕ ಮತ್ತು ರಕ್ಷಣಾ ಇಲಾಖೆ ತಿಳಿಸಿದೆ.

ಭೂಕಂಪ ವಲಯದ ರಸ್ತೆ ಸಂಚಾರ ಮತ್ತು ಸರಕು ರೈಲುಗಳ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ರೈಲ್ವೆ ಹಳಿಗಳ ಸುರಕ್ಷತಾ ಪರಿಶೀಲನೆಗೆ ರೈಲ್ವೆ ಪ್ರಾಧಿಕಾರ ಆದೇಶಿಸಿದೆ.

ಭೂಕಂಪ ಸಂಭವಿಸಿರುವ ಪ್ರದೇಶಗಳಿಗೆ ಗನ್ಸುವಿನ ಆಡಳಿತಾರೂಢ ಕಮ್ಯುನಿಸ್ಟ್ ಪಕ್ಷದ ಮುಖ್ಯಸ್ಥ ಹು ಚಾಂಗ್‌ಶೆಂಗ್‌ ಮತ್ತು ಗವರ್ನರ್‌ ರೆನ್‌ ಝೆನ್ಹೆ ಭೇಟಿ ನೀಡಿ, ರಕ್ಷಣಾ ಮತ್ತು ಪರಿಹಾರ ಕಾರ್ಯಗಳನ್ನು ಪರಿಶೀಲಿಸಿದ್ದಾರೆ. ಚೀನಾ ಅಧ್ಯಕ್ಷ ಷಿ ಜಿನ್‌ಪಿಂಗ್‌ ಅವರು ಭೂಕಂಪ ಪ್ರದೇಶಗಳಲ್ಲಿ ರಕ್ಷಣಾ ಕ್ರಮಗಳನ್ನು ಕೈಗೊಳ್ಳುವಂತೆ ಆದೇಶಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT