ಸೋಮವಾರ, 11 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಫ್ಗಾನಿಸ್ತಾನದಲ್ಲಿ ಮತ್ತೆ ಪ್ರಬಲ ಭೂಕಂಪ: ರಿಕ್ಟರ್‌ ಮಾಪಕದಲ್ಲಿ 6.3ರಷ್ಟು ದಾಖಲು

Published 11 ಅಕ್ಟೋಬರ್ 2023, 13:03 IST
Last Updated 11 ಅಕ್ಟೋಬರ್ 2023, 13:03 IST
ಅಕ್ಷರ ಗಾತ್ರ

ಚಾಹಕ್: ಪಶ್ಚಿಮ ಅಫ್ಗಾನಿಸ್ತಾನದಲ್ಲಿ ಬುಧವಾರ ಮತ್ತೆ ಪ್ರಬಲ ಭೂಕಂಪ ಸಂಭವಿಸಿದ್ದು, ಚಾಹಕ್  ಗ್ರಾಮದಲ್ಲಿ 700 ಮನೆಗಳು ಕುಸಿದಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಭೂಕಂಪದ ಪರಿಣಾಮ 117 ಮಂದಿ ಗಾಯಗೊಂಡಿದ್ದು ಅವರನ್ನು ಹೆರಾತ್‌ನ ಆಸ್ಪತ್ರೆಗೆ ದಾಖಲಿಸಲಾಗಿದೆ.

ಭೂಕಂಪದ ತೀವ್ರತೆಯು ರಿಕ್ಟರ್‌ ಮಾಪಕದಲ್ಲಿ 6.3ರಷ್ಟು ದಾಖಲಾಗಿದ್ದು, ಹೆರಾತ್‌ ಪಟ್ಟಣದ ಹೊರವಲಯದಲ್ಲಿ ಭೂಮಿಯಿಂದ 10 ಕಿ.ಮೀ. ಆಳದಲ್ಲಿ ಕಂಪನದ ಕೇಂದ್ರಬಿಂದುವನ್ನು ಗುರುತಿಸಲಾಗಿದೆ ಎಂದು ಅಮೆರಿಕದ ಭೂವೈಜ್ಞಾನಿಕ ಸಮೀಕ್ಷೆ ಸಂಸ್ಥೆ ಹೇಳಿದೆ.

ಭೂಕಂಪದ ಪರಿಣಾಮವಾಗಿ ಭೂಕುಸಿತ ಸಂಭವಿಸಿ ಹೆರಾತ್‌ ಬಳಿಯ ಹೆದ್ದಾರಿಯಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿದೆ ಎಂದು ಅಫ್ಗಾನಿಸ್ತಾನದ ವಾರ್ತಾ ಸಚಿವಾಲಯದ ವಕ್ತಾರ ಅಬ್ದುಲ್‌ ವಹೀದ್‌ ರಯಾನ್‌ ಹೇಳಿದ್ದಾರೆ.

ಪಶ್ಚಿಮ ಅಫ್ಗಾನಿಸ್ತಾನದಲ್ಲಿ ಈಚೆಗೆ ಸಂಭವಿಸಿದ ಸರಣಿ ಭೂಕಂಪಗಳಲ್ಲಿ 2 ಸಾವಿರಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT