ಸ್ಯಾನ್ ಫ್ರಾನ್ಸಿಸ್ಕೊ: ಅಮೆರಿಕದ ಉತ್ತರ ಕ್ಯಾಲಿಫೋರ್ನಿಯಾದಲ್ಲಿ ರಿಕ್ಟರ್ ಮಾಪಕದಲ್ಲಿ 7.0 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ ಎಂದು ವರದಿಯಾಗಿದೆ.

ಭೂಕಂಪದ ಬೆನ್ನಲ್ಲೇ ಕ್ಯಾಲಿಫೋರ್ನಿಯಾದ ಕರಾವಳಿ ಪ್ರದೇಶದಲ್ಲಿ ಸುನಾಮಿ ಎಚ್ಚರಿಕೆಯನ್ನು ನೀಡಿ ಬಳಿಕ ಹಿಂಪಡೆಯಲಾಗಿದೆ.

ಗುರುವಾರ ಬೆಳಿಗ್ಗೆ ಕಂಪನ ಅನುಭವ ಆಗಿದ್ದು, ತಕ್ಷಣಕ್ಕೆ ಯಾವುದೇ ಸಾವು-ನೋವಿನ ಬಗ್ಗೆ ವರದಿಯಾಗಿಲ್ಲ. ಈ ಪ್ರದೇಶದ ಜನರಲ್ಲಿ ಭೂಮಿ ನಡುಗಿದ ಅನುಭವ ಉಂಟಾಗಿದೆ.

ಕರಾವಳಿ ನಗರವಾದ ಫೆರ್ನ್ಡೇಲ್ನಿಂದ ಪಶ್ಚಿಮಕ್ಕೆ 68 ಕಿ.ಮೀ. ದೂರದಲ್ಲಿ ಭೂಕಂಪದ ಕೇಂದ್ರ ಬಿಂದು ಪತ್ತೆಯಾಗಿದೆ ಎಂದು ಅಮೆರಿಕದ ಭೂವೈಜ್ಞಾನಿಕ ಸಮೀಕ್ಷೆ ತಿಳಿಸಿದೆ.

ಭೂಕಂಪದ ಬೆನ್ನಲ್ಲೇ ಪ್ರಬಲ ಅಲೆಗಳು ಅಪ್ಪಳಿಸುವ ಸಾಧ್ಯತೆಯಿದೆ ಎಂದು ರಾಷ್ಟ್ರೀಯ ಹವಾಮಾನ ಸೇವೆಯು ಎಚ್ಚರಿಕೆ ನೀಡಿತು. ಬಳಿಕ ಸುನಾಮಿ ಎಚ್ಚರಿಕೆ ಹಿಂಪಡೆಯಲಾಗಿದೆ.

ಅಮೆರಿಕದ ಉತ್ತರ ಕ್ಯಾಲಿಫೋರ್ನಿಯಾದಲ್ಲಿ ನಡೆದ ಭೂಕಂಪದ ಕುರಿತು ಭಾರತದ ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್ಸಿಎಸ್) ಸಹ ಮಾಹಿತಿ ಹಂಚಿಕೊಂಡಿದೆ.
.Earthquake | ತೆಲಂಗಾಣದ ಮುಲುಗುವಿನಲ್ಲಿ 5.3 ತೀವ್ರತೆಯ ಭೂಕಂಪ.ಜಮ್ಮು ಮತ್ತು ಕಾಶ್ಮೀರದಲ್ಲಿ ಭೂಕಂಪ: 5.2 ರಷ್ಟು ತೀವ್ರತೆ ದಾಖಲು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.