ದೀರ್ ಅಲ್–ಬಲಾಹ್ : ಗಾಜಾ ಮೇಲಿನ ತನ್ನ ದಾಳಿಯನ್ನು ಇನ್ನಷ್ಟು ತೀವ್ರಗೊಳಿಸಲು ಇಸ್ರೇಲ್ ನಿರ್ಧರಿಸಿದೆ. ಗಾಜಾದ ವಿವಿಧ ಭಾಗಗಳಲ್ಲಿ ಬುಧವಾರ ಇಸ್ರೇಲ್ ನಡೆಸಿದ ದಾಳಿಯಲ್ಲಿ ಮಹಿಳೆಯರು, ಮಕ್ಕಳು, ಇಬ್ಬರು ಪತ್ರಕರ್ತರು ಸೇರಿ ಒಟ್ಟು 92 ಮಂದಿ ಮೃತಪಟ್ಟಿದ್ದಾರೆ.

ಗಾಜಾದ ಮಧ್ಯ ಭಾಗದಲ್ಲಿ ನಡೆಸಿದ ದಾಳಿಯಲ್ಲಿ 33 ಮಂದಿ ಮೃತಪಟ್ಟು 89 ಮಂದಿ ಗಾಯಗೊಂಡಿದ್ದಾರೆ. ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗಲಿದೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ಅಂದಾಜಿಸಿದ್ದಾರೆ.

ಗಾಜಾ ನಗರದಲ್ಲಿನ ನಿರಾಶ್ರಿತ ಶಿಬಿರವೊಂದರ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ ಸುಮಾರು 16 ಮಂದಿ ಮೃತಪಟ್ಟಿದ್ದಾರೆ. ಮತ್ತೊಂದು ಪ್ರದೇಶದಲ್ಲಿ ನಡೆಸಿದ ದಾಳಿಯಲ್ಲಿಯೂ 16 ಮಂದಿ ಮೃತಪಟ್ಟಿದ್ದಾರೆ. ಜನಸಂದಣಿ ಇದ್ದ ಮಾರುಕಟ್ಟೆವೊಂದರ ಮೇಲೆಯೂ ಇಸ್ರೇಲ್ ಸೇನೆ ಬುಧವಾರ ದಾಳಿ ನಡೆಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.