‘60 ಮಂದಿ ಹುತಿ ಬಂಡುಕೋರರು ಹತರಾಗಿದ್ದಾರೆ. ಅವರಲ್ಲಿ ಹೆಚ್ಚಿನವರು ಕಳೆದ 24 ಗಂಟೆಗಳಲ್ಲಿ ನಡೆಸಿದ ವಾಯುದಾಳಿಯಲ್ಲಿ ಹತರಾಗಿದ್ದಾರೆ. ಕಳೆದ 48 ಗಂಟೆಗಳಲ್ಲಿ ನಡೆದ ಘರ್ಷಣೆಯಲ್ಲಿ ಸರ್ಕಾರಿ ಪರವಾದ18 ಸೈನಿಕರು ಹತರಾಗಿದ್ದು, ಡಜನ್ಗಟ್ಟಲೆ ಸೈನಿಕರು ಗಾಯಗೊಂಡಿದ್ದಾರೆ’ ಎಂದು ಸರ್ಕಾರಿ ಮಿಲಿಟರಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.