ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚೀನಾದ ಕಲ್ಲಿದ್ದಲು ಗಣಿಯಲ್ಲಿ ಸ್ಫೋಟ: 8 ಮಂದಿ ಸಾವು, ಮುಂದುವರಿದ ರಕ್ಷಣಾ ಕಾರ್ಯ

Published 13 ಜನವರಿ 2024, 5:30 IST
Last Updated 13 ಜನವರಿ 2024, 5:30 IST
ಅಕ್ಷರ ಗಾತ್ರ

ಹೆನಾನ್: ಚೀನಾದ ಹೆನಾನ್ ಪ್ರಾಂತ್ಯದ ಪಿಂಗ್‌ಡಿಂಗ್‌ಶಾನ್‌ ನಗರದ ಕಲ್ಲಿದ್ದಲು ಗಣಿಯಲ್ಲಿ ಶುಕ್ರವಾರ ಅನಿಲ ಸ್ಫೋಟ ಸಂಭವಿಸಿದೆ. ಘಟನೆಯಲ್ಲಿ ಕನಿಷ್ಠ 8 ಜನರು ಮೃತಪಟ್ಟಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳನ್ನು ಉಲ್ಲೇಖಿಸಿ ಕ್ಸಿನ್ಹುವಾ ಸುದ್ದಿಸಂಸ್ಥೆ ವರದಿ ಮಾಡಿದೆ.

ಪಿಂಗ್‌ಡಿಂಗ್‌ಶಾನ್‌ ಟಿಯಾನನ್‌ ಕಲ್ಲಿದ್ದಲು ಗಣಿ ಕಂಪನಿ, ಲಿಮಿಟೆಡ್ (‌‌Pingdingshan Tianan Coal Mining C., Ltd)ಯ ಗಣಿಯಲ್ಲಿ ನಿನ್ನೆ ಮಧ್ಯಾಹ್ನ 2:55ಕ್ಕೆ ಘಟನೆ ನಡೆದಿದೆ. ಈ ವೇಳೆ ಒಟ್ಟು 425 ಜನರು ಇದ್ದರು. ಅವರಲ್ಲಿ 380 ಮಂದಿಯನ್ನು ಸುರಕ್ಷಿತವಾಗಿ ಹೊರತರಲಾಗಿದೆ. ಉಳಿದ 45 ಮಂದಿ ನಾಪತ್ತೆಯಾಗಿದ್ದಾರೆ ಎಂದು ತುರ್ತು ನಿರ್ವಹಣಾ ಏಜೆನ್ಸಿಯನ್ನು ಉಲ್ಲೇಖಿಸಿ ಕ್ಸಿನ್ಹುವಾ ವರದಿ ಮಾಡಿದೆ.

ಬಳಿಕ ತಡರಾತ್ರಿ 1 ಗಂಟೆಗೆ (ಸ್ಥಳೀಯ ಕಾಲಮಾನ) ನಾಪತ್ತೆಯಾದ 45 ಕಾರ್ಮಿಕರಲ್ಲಿ 8 ಮಂದಿ ಮೃತಪಟ್ಟಿದ್ದಾರೆ ಎಂದು ‌ವರದಿಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT