ಭಾನುವಾರ, 25 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾಕಿಸ್ತಾನ ಸೇನೆಯಿಂದ 8 ಭಯೋತ್ಪಾದಕರ ಹತ್ಯೆ

Published 27 ನವೆಂಬರ್ 2023, 2:39 IST
Last Updated 27 ನವೆಂಬರ್ 2023, 2:39 IST
ಅಕ್ಷರ ಗಾತ್ರ

ಪೇಶಾವರ: ಪಾಕಿಸ್ತಾನದ ಖೈಬರ್ ಪಖ್ತುಂಖ್ವಾದ ದಕ್ಷಿಣ ವಜೀರಿಸ್ತಾನ್ ಜಿಲ್ಲೆಯಲ್ಲಿ ನಡೆದ ಸೇನಾ ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಗಳು 8 ಭಯೋತ್ಪಾದಕರನ್ನು ಹತ್ಯೆ ಮಾಡಿದ್ದಾರೆ ಎಂದು ಪಾಕ್ ಮಿಲಿಟರಿಯ ಮಾಧ್ಯಮ ವಿಭಾಗ ತಿಳಿಸಿದೆ.

‘ದಕ್ಷಿಣ ವಜೀರಿಸ್ತಾನ್ ಜಿಲ್ಲೆಯ ಸರೋಘ ಪ್ರದೇಶದಲ್ಲಿ ಗುಪ್ತಚರ ಮಾಹಿತಿ ಆಧಾರಿತ ಕಾರ್ಯಾಚರಣೆ ನಡೆಸಲಾಯಿತು. ಈ ವೇಳೆ ಸೈನಿಕರು ಮತ್ತು ಉಗ್ರರ ನಡುವೆ ತೀವ್ರ ಗುಂಡಿನ ಚಕಮಕಿ ನಡೆದಿದ್ದು, 8 ಉಗ್ರರನ್ನು ಹೊಡೆದುರುಳಿಸಲಾಗಿದೆ. ಅವರಿಂದ ಶಸ್ತ್ರಾಸ್ತ್ರಗಳು, ಮದ್ದುಗುಂಡುಗಳು ಹಾಗೂ ಸ್ಫೋಟಕಗಳನ್ನು ವಶಪಡಿಸಿಕೊಳ್ಳಲಾಗಿದೆ' ಎಂದು ತಿಳಿಸಿದೆ.

ಹತ್ಯೆಯಾದ ಭಯೋತ್ಪಾದಕರು ಯಾವ ಸಂಘಟನೆಗೆ ಸೇರಿದವರು ಎಂದು ತಿಳಿದು ಬಂದಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT