ಮಾಸ್ಕೊ (ಎಪಿ): ವ್ಲಾಡಿವೋಸ್ಟಾಕ್‌ನಲ್ಲಿರುವ ಅಮೆರಿಕ ಕಾನ್ಸುಲೇಟ್ ಕಚೇರಿಯ ಮಾಜಿ ಉದ್ಯೋಗಿಯೊಬ್ಬ ಅಮೆರಿಕದ ರಾಜತಾಂತ್ರಿಕ ಅಧಿಕಾರಿಗಳಿಗಾಗಿ ಗೋಪ್ಯ ಮಾಹಿತಿ ಸಂಗ್ರಹಿಸುತ್ತಿದ್ದ ಎಂದು ರಷ್ಯಾದ ಉನ್ನತ ಭದ್ರತಾ ಸಂಸ್ಥೆ ಫೆಡರಲ್ ಸೆಕ್ಯುರಿಟಿ ಸರ್ವೀಸ್ (ಎಫ್‌ಎಸ್‌ಬಿ) ಸೋಮವಾರ ಆರೋಪಿಸಿದೆ.
ರಾಬರ್ಟ್ ಶೋನೊವ್ ಎಂಬಾತನನ್ನುಬಂಧಿಸಿದ್ದು, ಈತ ಉಕ್ರೇನ್‌ನಲ್ಲಿ ರಷ್ಯಾ ನಡೆಸುತ್ತಿರುವ ವಿಶೇಷ ಸೇನಾ ಕಾರ್ಯಾಚರಣೆಗೆ ಹಾಗೂ ಇತರ ವಿಚಾರಗಳಿಗೆ ಸಂಬಂಧಿಸಿದ ಮಾಹಿತಿ ಸಂಗ್ರಹಿಸುತ್ತಿದ್ದ ಎಂದು ಎಫ್‌ಎಸ್‌ಬಿ ಹೇಳಿದೆ.
ಗೋಪ್ಯ ಮಾಹಿತಿ ಸಂಗ್ರಹಿಸುವಂತೆ ರಷ್ಯಾದ ರಾಬರ್ಟ್‌ಗೆ ಸೂಚನೆ ನೀಡುತ್ತಿದ್ದ ಅಮೆರಿಕದ ಇಬ್ಬರು ರಾಜತಾಂತ್ರಿಕ ಅಧಿಕಾರಿಗಳಿಗೆ ವಿಚಾರಣೆಗೆ ಹಾಜರಾಗಲು ಸಮನ್ಸ್ ನೀಡಲಾಗಿದೆ ಎಂದು ತಿಳಿಸಿದೆ.
ರಾಬರ್ಟ್‌ನನ್ನು ಮೇ ತಿಂಗಳಲ್ಲಿ ಬಂಧಿಸಲಾಗಿತ್ತು. ಆದರೆ ರಷ್ಯಾದ ಅಧಿಕಾರಿಗಳು ಈ ಕುರಿತು ಯಾವುದೇ ಮಾಹಿತಿಯನ್ನು ಬಹಿರಂಗಪಡಿಸಿರಲಿಲ್ಲ. ಈತನನ್ನು ಬಂಧಿಸಿರುವುದಕ್ಕೆ ಅಮೆರಿಕದ ವಿದೇಶಾಂಗ ಇಲಾಖೆ ಖಂಡನೆ ವ್ಯಕ್ತಪಡಿಸಿತ್ತು.
ಬೇರೆ ದೇಶಕ್ಕೆ ಗೋಪ್ಯವಾಗಿ ಸಹಕಾರ ನೀಡಿರುವ ಆರೋಪ ಹೊರಿಸಿ ರಾಬರ್ಟ್‌ನನ್ನು ಬಂಧಿಸಲಾಗಿದೆ ಎಂದು ಎಫ್‌ಎಸ್‌ಬಿ ಅಧಿಕಾರಿಗಳು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.