ಇಸ್ಲಾಮಾಬಾದ್: ದಕ್ಷಿಣ ಅಫ್ಗಾನಿಸ್ತಾನದ ಕಂದಹಾರ ನಗರದಲ್ಲಿರುವ ಖಾಸಗಿ ಬ್ಯಾಂಕ್‌ನಲ್ಲಿ ಗುರುವಾರ ನಡೆದ ಆತ್ಮಾಹುತಿ ಬಾಂಬ್ ದಾಳಿಯಲ್ಲಿ ಮೂವರು ಮೃತಪಟ್ಟಿದ್ದು, 12 ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಂದಹಾರದಲ್ಲಿರುವ ‘ನ್ಯೂ ಕಾಬೂಲ್’ ಬ್ಯಾಂಕ್‌ನಲ್ಲಿ ಈ ಘಟನೆ ನಡೆದಿದ್ದು ಸಂತ್ರಸ್ತರೆಲ್ಲ ವೇತನ ಪಡೆದುಕೊಳ್ಳಲು ಬಂದಿದ್ದರು ಎಂದು ಮಾಹಿತಿ ಮತ್ತು ಸಂಸ್ಕ್ರತಿ ಇಲಾಖೆಯ ಮುಖ್ಯಸ್ಥ ಇನಾಮುಲ್ಲಾ ಸಮಂಗನಿ ತಿಳಿಸಿದ್ದಾರೆ.

ತಾಲಿಬಾನ್ ಗೃಹ ಸಚಿವಾಲಯದ ವಕ್ತಾರ ಅಬ್ದುಲ್ ಮತೀನ್ ಖಾನಿ ಕೂಡ ಬಾಂಬ್ ದಾಳಿಯನ್ನು ಖಚಿತಪಡಿಸಿದ್ದಾರೆ. ಆದರೆ, ಈ ಬಗ್ಗೆ ಹೆಚ್ಚಿನ ಮಾಹಿತಿ ನೀಡಿಲ್ಲ. ಘಟನೆ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ತಕ್ಷಣಕ್ಕೆ ಯಾವುದೇ ಸಂಘಟನೆ ದಾಳಿಯ ಹೊಣೆಯನ್ನು ಹೊತ್ತುಕೊಂಡಿಲ್ಲ. ತಾಲಿಬಾನ್‌ನ ಪ್ರಮುಖ ಪ್ರತಿಸ್ಪರ್ಧಿಯಾದ ‘ದಿ ಇಸ್ಲಾಮಿಕ್ ಸ್ಟೇಟ್ ಗ್ರೂಪ್’ ಈ ಹಿಂದೆ ಶಾಲೆ, ಆಸ್ಪತ್ರೆ ಹಾಗೂ ಮಸೀದಿಗಳಲ್ಲಿ ಬಾಂಬ್ ದಾಳಿಗಳನ್ನು ನಡೆಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.