ಶುಕ್ರವಾರ, 24 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚೀನಾ: ಸುಂಟರಗಾಳಿಯ ಅಬ್ಬರ

Published 27 ಏಪ್ರಿಲ್ 2024, 15:26 IST
Last Updated 27 ಏಪ್ರಿಲ್ 2024, 15:26 IST
ಅಕ್ಷರ ಗಾತ್ರ

ಬೀಜಿಂಗ್‌: ಚೀನಾದ ಗೌಂಗ್‌ಝೋ ನಗರದಲ್ಲಿ ಶನಿವಾರ ತೀವ್ರ ಆಲಿಕಲ್ಲು ಮಳೆಯ ನಡುವೆ  ಸುಂಟರಗಾಳಿಯೊಂದು ಬೀಸಿತು ಎಂದು ಚೀನಾ ಮಾಧ್ಯಮಗಳು ವರದಿ ಮಾಡಿವೆ.

‘ಮಧ್ಯಾಹ್ನ 3 ಗಂಟೆಯ ವೇಳೆ ಸುಂಟರಗಾಳಿ ಕಾಣಿಸಿಕೊಂಡಿದ್ದು, ಯಾವುದೇ ಹಾನಿ ಮತ್ತು ಗಾಯಗಳಾಗಿರುವ ಬಗ್ಗೆ ವರದಿಯಾಗಿಲ್ಲ’ ಎಂದು ಚೀನಾದ ಹವಾಮಾನ ಇಲಾಖೆ ತಿಳಿಸಿದೆ.

ಮಧ್ಯಾಹ್ನದ ವೇಳೆ ಆಕಾಶ ಕತ್ತಲಾಗಿರುವುದು ಮತ್ತು‌ ದೂಳು, ಕಲ್ಲುಗಳು ಗಾಳಿಯೊಂದಿಗೆ ಸುತ್ತುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.

ಇತರ ಭಾಗದಲ್ಲಿಯೂ ಸುಂಟರಗಾಳಿ ಅಪ್ಪಳಿಸುವ ಬಗ್ಗೆ ಎಚ್ಚರಿಕೆ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT