ಶನಿವಾರ, 15 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಬುಧಾಬಿಯ ಹಿಂದೂ ದೇವಾಲಯಕ್ಕೆ ಭೇಟಿ ನೀಡಿದ ನಟ ರಜನಿಕಾಂತ್‌

Published 24 ಮೇ 2024, 11:31 IST
Last Updated 24 ಮೇ 2024, 11:31 IST
ಅಕ್ಷರ ಗಾತ್ರ

ಅಬುಧಾಬಿ: ನಟ ರಜನಿಕಾಂತ್‌ ಅವರು ಅಬುಧಾಬಿಯಲ್ಲಿರುವ ಬಿಎಪಿಎಸ್‌ ಹಿಂದೂ ದೇವಾಲಯಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ್ದಾರೆ.

ಈ ಕುರಿತು ಬಿಎಪಿಎಸ್‌ ಸಂಸ್ಥೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಫೋಟೊ, ವಿಡಿಯೊಗಳನ್ನು ಹಂಚಿಕೊಂಡಿದೆ. ವಿಡಿಯೊದಲ್ಲಿ ಅರ್ಚಕರೊಬ್ಬರು ರಜನಿಕಾಂತ್‌ ಅವರಿಗೆ ದೇವಾಲಯದ ವಿಶೇಷತೆಗಳ ಬಗ್ಗೆ ವಿವರಿಸುವುದನ್ನು ಕಾಣಬಹುದಾಗಿದೆ. ಕೊನೆಯಲ್ಲಿ ರಜನಿಕಾಂತ್‌ ಅವರ ಕೈಗೆ ದಾರ ಕಟ್ಟಿ, ಪುಸ್ತಕವನ್ನು ಉಡುಗೊರೆಯಾಗಿ ನೀಡಿ ಮಂದಿರದಿಂದ ಬೀಳ್ಕೊಡಲಾಗಿದೆ.

ಗುರುವಾರ ರಜನಿಕಾಂತ್‌ ಅವರು ಅಬುಧಾಬಿ ಸರ್ಕಾರದ ಕಾರ್ಯಕಾರಿ ಮಂಡಳಿಯ ಸದಸ್ಯ ಹಾಗೂ ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಇಲಾಖೆಯ ಅಧ್ಯಕ್ಷ ಮೊಹಮ್ಮದ್ ಖಲೀಫಾ ಅಲ್ ಮುಬಾರಕ್ ಅವರಿಂದ ಗೋಲ್ಡನ್ ವೀಸಾ ಪಡೆದುಕೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT