ಜಲಾಲಾಬಾದ್: ಕಳೆದ ವಾರ ಅಫ್ಗಾನಿಸ್ತಾನದಲ್ಲಿ ಸಂಭವಿಸಿದ ಪ್ರಬಲ ಭೂಕಂಪದಿಂದ ನಾಶವಾದ ಮನೆಗಳ ಅವಶೇಷಗಳ ಅಡಿಯಲ್ಲಿ ನೂರಾರು ಶವಗಳು ಪತ್ತೆಯಾಗಿದ್ದು, ಸಾವಿನ ಸಂಖ್ಯೆ 2,200ಕ್ಕೂ ಹೆಚ್ಚಾಗಿದೆ ಎಂದು ತಾಲಿಬಾನ್ ಸರ್ಕಾರ ಗುರುವಾರ ತಿಳಿಸಿದೆ.

ಸಾವಿನ ಸಂಖ್ಯೆಯನ್ನು ತಿಳಿಸಿದ ತಾಲಿಬಾನ್ ವಕ್ತಾರ ಹಮ್ದುಲ್ಲಾ ಫಿತ್ರತ್ ಅವರು, ‘ಭೂಕಂಪದಿಂದ ಕುನಾರ್ನಲ್ಲಿ ಹೆಚ್ಚು ಸಾವು–ನೋವುಗಳು ಸಂಭವಿಸಿವೆ. ರಕ್ಷಣಾ ಮತ್ತು ಶೋಧ ಕಾರ್ಯಾಚರಣೆ ಮುಂದುವರೆದಿದೆ. ಜನರಿಗಾಗಿ ಡೇರೆಗಳನ್ನು ನಿರ್ಮಿಸಲಾಗಿದ್ದು, ಅಗತ್ಯ ಸಾಮಗ್ರಿಗಳ ವಿತರಣೆ ಮುಂದುವರೆದಿದೆ’ ಎಂದು ತಿಳಿಸಿದರು.

ಆಗಸ್ಟ್ 31ರ ರಾತ್ರಿ ಅಫ್ಗಾನಿಸ್ತಾನದ ಕೆಲವು ಪ್ರಾಂತ್ಯಗಳಲ್ಲಿ 6.0 ತೀವ್ರತೆಯ ಭೂಕಂಪ ಸಂಭವಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.