ಕಾಬೂಲ್: ಅಫ್ಗಾನಿಸ್ತಾನದ ಸರ್ಕಾರಿ ಸ್ವಾಮ್ಯದ ಸುದ್ದಿ ವಾಹಿನಿಯೊಂದರಲ್ಲಿ ಕಳೆದ ಆರು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ನಿರೂಪಕಿಯ ಮೇಲೆ ತಾಲಿಬಾನ್ ನಿರ್ಬಂಧ ಹೇರಿದೆ.

ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೊ ಬಿಡುಗಡೆ ಮಾಡಿರುವ ಸುದ್ದಿ ನಿರೂಪಕಿ ಶಬನಮ್ ದವ್ರಾನ್ ಅವರು ಸಹಾಯಕ್ಕಾಗಿ ಅಂಗಲಾಚಿದ್ದಾರೆ.

ಶಬನಮ್ ಅವರು ಅಫ್ಗಾನಿಸ್ತಾನದ ಸರ್ಕಾರಿ ಸ್ವಾಮ್ಯದ 'ಆರ್‌ಟಿಎ ಪಾಷ್ತೊ' ಎಂಬ ಸುದ್ದಿ ವಾಹಿನಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು.

'ವ್ಯವಸ್ಥೆ ಬದಲಾದ ನಂತರವೂ ಕೆಲಸ ಮಾಡಲು ನಾನು ಕಚೇರಿಗೆ ತೆರಳಿದೆ. ನನ್ನ ಕಚೇರಿಯ ಕಾರ್ಡ್ ತೋರಿಸಿದರೂ ಒಳಹೋಗಲು ನನಗೆ ಅವಕಾಶವನ್ನೇ ನೀಡಲಿಲ್ಲ' ಎಂದು ಶಬನಮ್ ತಿಳಿಸಿದ್ದಾರೆ.

'ನೀನು ಮಹಿಳೆ, ಮನೆಗೆ ತೆರಳು' ಎಂಬುದಾಗಿ ತಾಲಿಬಾನ್ ಅಧಿಕಾರಿಗಳು ಹೇಳಿದರು ಎಂದು ಶಬನಮ್ ಆರೋಪಿಸಿದ್ದಾರೆ.

'ನಮ್ಮ ಜೀವಕ್ಕೆ ಅಪಾಯವಿದೆ. ನನ್ನ ಮಾತುಗಳನ್ನು ಕೇಳುತ್ತಿರುವವರು ನಮಗೆ ಸಹಾಯ ಮಾಡಿ' ಎಂದು ಸುದ್ದಿ ನಿರೂಪಕಿ ವಿಡಿಯೊದಲ್ಲಿ ಅಂಗಲಾಚಿದ್ದಾರೆ.

ಅಫ್ಗಾನಿಸ್ತಾನದ ಮೇಲೆ ಹಿಡಿತ ಸಾಧಿಸಿರುವ ತಾಲಿಬಾನ್ ಶರಿಯಾ ಕಾನೂನಿನ ಅಡಿಯಲ್ಲಿ ಮಹಿಳೆಯರ ಹಕ್ಕುಗಳನ್ನು ರಕ್ಷಿಸಲಾಗುತ್ತದೆ ಎಂದು ಪ್ರತಿಪಾದಿಸಿತ್ತು.

ಇವುಗಳನ್ನೂ ಓದಿ

ಉಟ್ಟ ಬಟ್ಟೆ, ಚಪ್ಪಲಿಯೊಂದಿಗೆ ದೇಶ ತೊರೆದೆ: ಅಫ್ಗನ್ ಅಧ್ಯಕ್ಷ ಘನಿ ವಿಡಿಯೊ ಸಂದೇಶ

ತಾಲಿಬಾನಿಗಳ ಪೈಕಿ ಇಬ್ಬರು ಮಲಯಾಳ ಭಾಷಿಕರು?

ಸರ್ಕಾರ ಸೇರಿ: ಮಹಿಳೆಯರಿಗೆ ಆಹ್ವಾನ ನೀಡಿದ ತಾಲಿಬಾನ್

20 ವರ್ಷಗಳ ಸುದೀರ್ಘ ಹೋರಾಟ; ಅಫ್ಗನ್ನಲ್ಲಿ ಅಮೆರಿಕ ಮಾಡಿದ ಖರ್ಚೆಷ್ಟು?

ಕಾಬೂಲ್ನ ಅಮ್ಯೂಸ್ಮೆಂಟ್ ಪಾರ್ಕ್ಗೆ ನುಗ್ಗಿ ಆಟಿಕೆ ಕಾರಿನಲ್ಲಿ ಆಟವಾಡಿದ ಉಗ್ರರು

ಅಫ್ಗನ್ ಮಹಿಳೆಯರು, ಬಾಲಕಿಯರ ಸುರಕ್ಷತೆ ಬಗ್ಗೆ ಆತಂಕವಾಗಿದೆ: ಮಲಾಲಾ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.