ಲಾಸ್ ಏಂಜಲೀಸ್: ಸಿನಿಮಾ ಚಿತ್ರೀಕರಣದ ವೇಳೆ ಅಮೆರಿಕದ ನಟ ಆಲೆಕ್ ಬಾಲ್ಡ್‌ವಿನ್ ಬಳಸುತ್ತಿದ್ದ ಬಂದೂಕಿನಿಂದ ಹಾರಿದ ಗುಂಡು ಛಾಯಾಗ್ರಾಹಕಿಯನ್ನು ಬಲಿ ಪಡೆದಿದೆ. ನ್ಯೂ ಮೆಕ್ಸಿಕೊದಲ್ಲಿ ಚಿತ್ರೀಕರಣದ ಸೆಟ್‌ನಲ್ಲಿ ಈ ದುರ್ಘಟನೆ ನಡೆದಿರುವುದಾಗಿ ಅಮೆರಿಕದ ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.
'ರಸ್ಟ್' (Rust) ಹೆಸರಿನ ಸಿನಿಮಾ ಚಿತ್ರೀಕರಣದಲ್ಲಿ ಪಾರ್ಪಟಿ ಗನ್‌ನಿಂದ ನಟ ಬಾಲ್ಡ್‌ವಿನ್ ಸಿಡಿಸಿದ ಗುಂಡು ಒಬ್ಬರ ಸಾವಿಗೆ ಕಾರಣವಾಗಿದೆ. ಈ ಘಟನೆಯಲ್ಲಿ ಛಾಯಾಗ್ರಾಹಕಿ ಹಲಿನಾ ಹಚಿನ್ಸ್ (42) ಸಾವಿಗೀಡಾದರೆ, ನಿರ್ದೇಶಕ ಜೋಲ್ ಸೌಜಾ (48) ಗಾಯಗೊಂಡಿದ್ದಾರೆ.