ಕಠ್ಮಂಡು: ನೇಪಾಳದ ಪಶುಪತಿನಾಥ ದೇವಾಲಯದಲ್ಲಿ ಶಿವಲಿಂಗದ ಮೇಲಿನ 100 ಕೆ.ಜಿ. ತೂಕದ ಚಿನ್ನದ ಆಭರಣದಲ್ಲಿ 10 ಕೆ.ಜಿ. ಚಿನ್ನ ನಾಪತ್ತೆಯಾಗಿದೆ ಎಂಬ ಬಗ್ಗೆ ತನಿಖೆ ಮಾಡುವ ಸಲುವಾಗಿ ದೇವಾಲಯವನ್ನು ಭಾನುವಾರ ಬಂದ್ ಮಾಡಲಾಗಿದೆ.

ನೇಪಾಳದ ಭ್ರಷ್ಟಾಚಾರ ವಿರೋಧಿ ಸಂಸ್ಥೆಯು ದೇವಾಲಯವನ್ನು ತನಿಖೆಗಾಗಿ ವಶಕ್ಕೆ ಪಡೆದಿದೆ. ದೇವರ ಚಿನ್ನದ ಆಭರಣವು ಕಾಣೆಯಾದ ಕುರಿತು ಸಂಸತ್ತಿನಲ್ಲಿ ಚರ್ಚೆ ನಡೆದ ಬಳಿಕ ಸರ್ಕಾರವು ತನಿಖೆಗೆ ನಿರ್ದೇಶನ ನೀಡಿದೆ.

ದೇವಸ್ಥಾನದ ಆವರಣದಲ್ಲಿ ನೇಪಾಳ ಸೇನೆಯ ಯೋಧರು ಸೇರಿದಂತೆ ಹತ್ತಾರು ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ತನಿಖಾ ಪ್ರಕ್ರಿಯೆಯು ಪ್ರಗತಿಯಲ್ಲಿದೆ ಎಂದು ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.