ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುಂಡಿನ ದಾಳಿ: ಬಂದೂಕುಧಾರಿ ಸೇರಿ ನಾಲ್ವರ ಸಾವು

Published 24 ಆಗಸ್ಟ್ 2023, 16:27 IST
Last Updated 24 ಆಗಸ್ಟ್ 2023, 16:27 IST
ಅಕ್ಷರ ಗಾತ್ರ

ವಾಷಿಂಗ್ಟನ್‌: ದಕ್ಷಿಣ ಕ್ಯಾಲಿಫೋರ್ನಿಯಾದ ಟ್ರಾಬುಕೊ ಕ್ಯಾನ್‌ಯೋನ್‌ನ ಬೈಕರ್‌ ಬಾರ್‌ನಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಬಂದೂಕುಧಾರಿ ಸೇರಿ ನಾಲ್ವರು ಮೃತಪಟ್ಟಿದ್ದು, ಆರು ಮಂದಿ ಗಾಯಗೊಂಡಿದ್ದಾರೆ.

ಸಂಗೀತ ಕಾರ್ಯಕ್ರಮ ವೀಕ್ಷಿಸಲು ಬಾರ್‌ನಲ್ಲಿ ಸೇರಿದ್ದ ಜನರ ಮೇಲೆ ನಿವೃತ್ತ ಅಧಿಕಾರಿಯೊಬ್ಬ ಗುಂಡಿನ ದಾಳಿ ನಡೆಸಿದ್ದಾನೆ ಎಂದು ‘ನ್ಯೂಯಾರ್ಕ್‌ ಟೈಮ್ಸ್‌’ ವರದಿ ಮಾಡಿದೆ.

ಗಾಯಾಳುಗಳಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಗುಂಡಿನ ದಾಳಿ ನಡೆದಿರುವ ಮಾಹಿತಿ ಅರಿತು ಸ್ಥಳಕ್ಕೆ ಧಾವಿಸಿದ ಪೊಲೀಸರು ಬಂದೂಕುಧಾರಿಯನ್ನು ಹತ್ಯೆ ಮಾಡಿದ್ದಾರೆ ಎಂದು ವಿವರಿಸಿದ್ದಾರೆ.

ಶಂಕಿತ ದಾಳಿಕೋರ ಹಲವು ವರ್ಷಗಳ ಹಿಂದೆ ಸೇವೆಯಿಂದ ನಿವೃತ್ತನಾಗಿದ್ದ. ಆತ ತನ್ನ ಪರಿತ್ಯಕ್ತ ಪತ್ನಿಯನ್ನು ಗುರಿಯಾಗಿಸಿ ದಾಳಿ ನಡೆಸಿದ್ದಾನೆ. ಆಕೆ ಕೂಡ ಮೃತಪಟ್ಟಿದ್ದಾಳೆ ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT