ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಬೂಲ್‌ನಲ್ಲಿ‌ ರಾಕೆಟ್‌ ದಾಳಿ: ಎಂಟು ಮಂದಿ ಸಾವು

Last Updated 21 ನವೆಂಬರ್ 2020, 8:38 IST
ಅಕ್ಷರ ಗಾತ್ರ

ಕಾಬೂಲ್‌: ಉಗ್ರರು ಇಲ್ಲಿ ಶನಿವಾರ ಬೆಳಿಗ್ಗೆ ನಡೆಸಿದ ರಾಕೆಟ್‌ ದಾಳಿಯಲ್ಲಿ ಎಂಟು ಮಂದಿ ಮೃತರಾಗಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.

‘ಉಗ್ರರು ಒಟ್ಟು23 ರಾಕೆಟ್‌ಗಳನ್ನು ಉಡಾಯಿಸಿದ್ದರು. ಈ ದಾಳಿಯಲ್ಲಿ ಕನಿಷ್ಠ ಎಂಟು ಮಂದಿ ಸಾವಿಗೀಡಾಗಿದ್ದಾರೆ.31 ಮಂದಿ ಗಾಯಗೊಂಡಿದ್ದಾರೆ’ ಎಂದು ಆಂತರಿಕಾ ಭದ್ರತಾ ಸಚಿವಾಲಯದ ವಕ್ತಾರ ತಾರಿಕ್‌ ಅರಿಯಾನ್‌ ಹೇಳಿದ್ದಾರೆ.

‘ತಾಲಿಬಾನ್‌ ಉಗ್ರರು ಈ ಕೃತ್ಯವನ್ನು ಎಸಗಿದ್ದಾರೆ’ ಎಂದು ಅವರು ದೂರಿದ್ದಾರೆ.

‘ರಾಯಭಾರ ಕಚೇರಿಗಳು ಹಾಗೂ ಅಂತರರಾಷ್ಟ್ರೀಯ ಕಂಪನಿಗಳಿರುವ ಹಸಿರು ವಲಯವನ್ನೇ ಗುರಿಯಾಗಿಸಿಕೊಂಡು ಉಗ್ರರು ಶನಿವಾರ ಬೆಳಿಗ್ಗೆ 9 ಗಂಟೆ ಸುಮಾರಿಗೆ ರಾಕೆಟ್‌ ದಾಳಿ ನಡೆಸಿದ್ದರು. ಆದರೆ ದುರಾದೃಷ್ಟವಶಾತ್‌ ಆ ರಾಕೆಟ್‌ಗಳು ಜನವಸತಿ ಪ್ರದೇಶಗಳಲ್ಲಿ ಬಿದ್ದಿವೆ’ ಎಂದು ಅವರು ಮಾಹಿತಿ ನೀಡಿದ್ದಾರೆ.

ರಾಕೆಟ್‌ ದಾಳಿಯಿಂದಾಗಿ ಬೃಹತ್‌ ಕಟ್ಟಡಗಳ ಗೋಡೆಗಳಿಗೆ ಹಾಗೂ ಕಿಟಕಿಗಳಿಗೆ ಹಾನಿಯಾಗಿರುವ ವಿಡಿಯೊ ಹಾಗೂ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ತಾಲಿಬಾನ್‌ ಸೇರಿದಂತೆ ಯಾವ ಉಗ್ರ ಸಂಘಟನೆಯೂ ಈ ದಾಳಿಯ ಹೊಣೆ ಹೊತ್ತುಕೊಂಡಿಲ್ಲ.

ಕಾಬೂಲ್‌ನಲ್ಲಿ ಶಿಕ್ಷಣ ಸಂಸ್ಥೆಗಳ ಮೇಲೆ ಹಾಗೂ ಇತರೆಡೆ ಇತ್ತೀಚೆಗೆ ನಡೆದಿದ್ದ ಉಗ್ರರ ದಾಳಿಯಲ್ಲಿ ಸುಮಾರು 50 ಮಂದಿ ಅಸುನೀಗಿದ್ದರು.

‘ಅಫ್ಗಾನಿಸ್ತಾನದ ರಾಜಧಾನಿ ಕಾಬೂಲ್‌ನಲ್ಲಿ ನಡೆದಿರುವ ರಾಕೆಟ್‌ ದಾಳಿಯಲ್ಲಿ ನಮ್ಮ ಪಾತ್ರವಿಲ್ಲ. ನಾವು ಸಾರ್ವಜನಿಕ ಸ್ಥಳಗಳ ಮೇಲೆ ಕಣ್ಣುಮುಚ್ಚಿಕೊಂಡು ದಾಳಿ ನಡೆಸುವವರಲ್ಲ’ ಎಂದು ತಾಲಿಬಾನ್‌ನ ವಕ್ತಾರ ಜಬಿವುಲ್ಲಾ ಮುಜಾಹಿದ್‌ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT