ಇಸ್ಲಾಮಾಬಾದ್: ವಾಯವ್ಯ ಪಾಕಿಸ್ತಾನದಲ್ಲಿನ ಪೊಲೀಸ್ ಠಾಣೆಯೊಂದರ ಮೇಲೆ ಉಗ್ರರು ದಾಳಿ ನಡೆಸಿದ್ದು, ಕನಿಷ್ಠ 10 ಪೊಲೀಸ್ ಸಿಬ್ಬಂದಿ ಹತ್ಯೆಯಾಗಿದ್ದಾರೆ ಎಂದು ಸೋಮವಾರ ಪೊಲೀಸರು ತಿಳಿಸಿದ್ದಾರೆ.

ಸ್ಥಳೀಯ ಕಾಲಮಾನ ಮುಂಜಾನೆ 3 ಗಂಟೆಗೆ ಉಗ್ರರು ಪೊಲೀಸ್ ಠಾಣೆಯ ಮೇಲೆ ಸ್ನೈಪರ್ ದಾಳಿ ಮಾಡಿದ್ದಾರೆ. ಬಳಿಕ ಠಾಣೆಯನ್ನು ಪ್ರವೇಶಿಸಿ ಹ್ಯಾಂಡ್ ಗ್ರೆನೇಡ್‌ಗಳನ್ನು ಸಿಡಿಸಿದ್ದಾರೆ. ಇದರಿಂದಾಗಿ ಕನಿಷ್ಠ 10 ಪೊಲೀಸ್ ಸಿಬ್ಬಂದಿ ಮೃತಪಟ್ಟಿದ್ದಾರೆ ಎಂದು ಪಾಕಿಸ್ತಾನದ ಖೈಬರ್-ಪಖ್ತುಂಕ್ವಾ ಪ್ರಾಂತ್ಯದ ದ್ರಾಬಾನ್ ಪ್ರದೇಶದ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ದಾಳಿಯ ಹಿಂದೆ ಯಾರ ಕೈವಾಡವಿದೆ ಮತ್ತು ಇದು ಚುನಾವಣೆಗೆ ಸಂಬಂಧಿಸಿದ ದಾಳಿಯೇ ಎಂಬುದು ತಕ್ಷಣಕ್ಕೆ ಸ್ಪಷ್ಟವಾಗಿಲ್ಲ ಎಂದೂ ಅವರು ತಿಳಿಸಿದ್ದಾರೆ.

ಪಾಕಿಸ್ತಾನದಲ್ಲಿ ಸಾರ್ವತ್ರಿಕ ಚುನಾವಣೆ ಸಮೀಸುತ್ತಿದ್ದಂತೆ ಹಿಂಸಾಚಾರದ ಘಟನೆಗಳು ಹೆಚ್ಚುತ್ತಿವೆ. ಇದೇ 8 ರಂದು ಪಾಕಿಸ್ತಾನ ಲೋಕಸಭೆಗೆ ಚುನಾವಣೆ ನಡೆಯಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.