ಬಾಗ್ದಾದ್: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ಉದ್ವಿಗ್ನತೆ ಹೆಚ್ಚುತ್ತಿದ್ದು ಇರಾಕ್ ರಾಜಧಾನಿ ಬಾಗ್ದಾದ್ನಲ್ಲಿರುವ ಅಮೆರಿಕದ ರಾಯಭಾರ ಕಚೇರಿ ಮೇಲೆ ಮಂಗಳವಾರ ಬೆಳಿಗ್ಗೆ ದಾಳಿ ನಡೆಸಲಾಗಿದೆ.

ಡ್ರೋನ್ ಹಾಗೂ ರಾಕೆಟ್ಗಳ ಮೂಲಕ ದಾಳಿ ನಡೆಸಲಾಗಿದೆ ಎಂದು ಇರಾಕ್ ಭದ್ರತಾ ಮೂಲಗಳು ತಿಳಿಸಿವೆ.

ಯುದ್ಧ ಆರಂಭವಾದ ಬಳಿಕ ನಡೆದ ಇದು ಅತ್ಯಂತ ತೀವ್ರ ದಾಳಿಯಾಗಿದೆ. ಕನಿಷ್ಠ ಐದು ಡ್ರೋನ್ ಮತ್ತು ಎರಡು ರಾಕೇಟ್ಗಳನ್ನು ಬಳಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಾಯಭಾರ ಕಚೇರಿ ಮಾತ್ರವಲ್ಲದೇ ಬಾಗ್ದಾದ್ ನಗರದಲ್ಲಿ ಕೆಲ ಕಡೆಗಳಲ್ಲಿ ಭಾರೀ ಸ್ಫೋಟದ ಶಬ್ದ ಕೇಳಿಬಂದಿದೆ ಎಂದು ರಾಯಿಟರ್ಸ್ ವರದಿ ಮಾಡಿದೆ.

ಈ ದಾಳಿಯಿಂದಾಗಿ ಈ ಪ್ರದೇಶದಲ್ಲಿ ಉದ್ವಿಗ್ನತೆ ಮತ್ತಷ್ಟು ಹೆಚ್ಚುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಅಂದಾಜಿಸಿದ್ದಾರೆ.

ದುಬೈ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಸಮೀಪ ಡ್ರೋನ್ ದಾಳಿ: ಮಂಗಳವಾರ ಬೆಳಗ್ಗೆ ದುಬೈ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನ್ ಡ್ರೋನ್ ದಾಳಿ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಘಟನೆಯಲ್ಲಿ ಯಾವುದೇ ಹಾನಿ ಸಂಭವಿಸಿಲ್ಲ ಎಂದು ಅವರು ಮಾಹಿತಿ ನೀಡಿದ್ದಾರೆ.

ಸೋಮವಾರ ಇಲ್ಲಿನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ತೈಲ ಟ್ಯಾಂಕರ್ ಒಂದಕ್ಕೆ ಇರಾನ್ನ ಡ್ರೋನ್ ಡಿಕ್ಕಿಯಾದ ಪರಿಣಾಮ ತೀವ್ರ ಬೆಂಕಿ ಕಾಣಿಸಿಕೊಂಡಿದೆ. ಇದರಿಂದ ವಿಮಾನ ನಿಲ್ದಾಣವು ಕೆಲವು ಗಂಟೆ ಎಲ್ಲಾ ವಿಮಾನ ಪ್ರಯಾಣವನ್ನು ರದ್ದುಗೊಳಿಸಿತ್ತು.

ಇಸ್ರೇಲ್ ಮೇಲೆ ಇರಾನ್ ಕ್ಷಿಪಣಿ ದಾಳಿ: ಇಸ್ರೇಲ್ ಮೇಲೆ ಇರಾನ್ ಕ್ಷಿಪಣಿಗಳನ್ನು ಹಾರಿಸಿದೆ ಎಂದು ಇಸ್ರೇಲ್ ಸೇನೆ ತಿಳಿಸಿದೆ. ಮಧ್ಯ ಇಸ್ರೇಲ್ ಮತ್ತು ಟೆಲ್ ಅವೀವ್ ಪ್ರದೇಶದ ಮೇಲೆ ಅನೇಕ ದಾಳಿಗಳು ನಡೆದಿವೆ. ಇದರಿಂದ ಸುಮಾರು 23 ಸ್ಥಳಗಳಲ್ಲಿ ಹಾನಿ ಉಂಟಾಗಿದ್ದು, ಒಂದು ಕಡೆ ಸಣ್ಣ ಮಟ್ಟದ ಅಗ್ನಿ ಅವಘಡವೂ ಸಂಭವಿಸಿದೆ ಎಂದು ಮಂಗಳವಾರ ವರದಿಯಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.