ಸಿಡ್ನಿ: ಸಿಡ್ನಿಯಲ್ಲಿ ಕೋವಿಡ್–19 ಪ್ರಕರಣಗಳು ಹೆಚ್ಚುತ್ತಿರುವ ಕಾರಣ ನ್ಯೂಸೌಥ್ ವೇಲ್ಸ್ ರಾಜ್ಯ ಸರ್ಕಾರ ನಗರದಲ್ಲಿ ತುರ್ತು ಪರಿಸ್ಥಿತಿ ಘೋಷಿಸಿ ಶುಕ್ರವಾರ ಆದೇಶಿಸಿದೆ.

ಕಳೆದ 24 ಗಂಟೆಗಳ ಅವಧಿಯಲ್ಲಿ ನಗರದಲ್ಲಿ ಕೋವಿಡ್–19ನ 136 ಹೊಸ ಪ್ರಕರಣಗಳು ವರದಿಯಾಗಿದ್ದು, ಒಬ್ಬ ವ್ಯಕ್ತಿ ಮೃತ್ತಪಟ್ಟಿದ್ದಾರೆ. ಕಳೆದ ಜೂನ್ ಮಧ್ಯಭಾಗದಲ್ಲಿ ಇಲ್ಲಿ ಕೊರೊನಾ ಸೋಂಕು ಪ್ರಸರಣ ಹೆಚ್ಚಿದ ನಂತರ ಒಂದೇ ದಿನದಲ್ಲಿ ವರದಿಯಾಗಿರುವ ಗರಿಷ್ಠ ಪ್ರಕಣಗಳು ಇವಾಗಿವೆ. ಈ ಹಿನ್ನೆಲೆಯಲ್ಲಿ ತುರ್ತು ಪರಿಸ್ಥಿತಿಯನ್ನು ಘೋಷಿಸಿಲಾಗಿದೆ ಎಂದು ಮೂಲಗಳು ಹೇಳಿವೆ.

‘ಸಿಡ್ನಿಯ ಪಶ್ಚಿಮ ಹಾಗೂ ದಕ್ಷಿಣ ಉಪನಗರಗಳಲ್ಲಿ ಸೋಂಕು ಪ್ರಸರಣ ಅಧಿಕವಾಗಿದೆ. ಹೀಗಾಗಿ ಈ ಪ್ರದೇಶಗಳಿಗೆ ಹೆಚ್ಚಿನ ಪ್ರಮಾಣದಲ್ಲಿ ಕೋವಿಡ್ ಲಸಿಕೆಯನ್ನು ಪೂರೈಸಬೇಕು’ ಎಂದು ರಾಜ್ಯದ ಪ್ರಧಾನಿ ಗ್ಲ್ಯಾಡಿಸ್ ಬೆರೆಜಿಕ್ಲಿಯನ್ ಅವರು ಫೆಡರಲ್ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಕೊರೊನಾ ವೈರಸ್‌ನ ಡೆಲ್ಟಾ ಪ್ಲಸ್ ತಳಿಯ ಸೋಂಕು ವ್ಯಾಪಕವಾಗುತ್ತಿರುವ ಹಿನ್ನೆಲೆಯಲ್ಲಿ ಕಳೆದ ತಿಂಗಳಿನಿಂದ ಸಿಡ್ನಿ, ವಿಕ್ಟೋರಿಯಾ ರಾಜ್ಯ ಹಾಗೂ ದಕ್ಷಿಣ ಆಸ್ಟ್ರೇಲಿಯಾದ ರಾಜ್ಯಗಳಲ್ಲಿ ಲಾಕ್‌ಡೌನ್ ಹೇರಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.